- +91 73497 60202
- [email protected]
- November 22, 2024 8:33 AM
ನ್ಯೂಸ್ ನಾಟೌಟ್ : ಗಣೇಶ ವಿಸರ್ಜನೆಯ ಶೋಭಾಯಾತ್ರೆ ಮೆರವಣಿಗೆ ವೇಳೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದಡಿ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಾಗಿದೆ. ಸೆ.21 ರಂದು ಯಾದಗಿರಿಯ ಮಹಾಗಣಪತಿ ವಿಸರ್ಜನೆ ಶೋಭಾಯಾತ್ರೆಯಲ್ಲಿ ಪ್ರತಾಪ್ ಸಿಂಹ ಭಾಗವಹಿಸಿದ್ದರು. ಮುಸ್ಲಿಮರ ಕುರಿತು ಪ್ರಚೋದನಕಾರಿ ಹೇಳಿಕೆ ನೀಡಿದ್ದರು.ಗಣೇಶ ವಿಸರ್ಜನೆ ವೇಳೆ ಎಲ್ಲಾ ಕಡೆ ಕಲ್ಲು ತೂರುವ ಪ್ರವೃತ್ತಿ ಕಾಣಸ್ತಾ ಇದೆ. ಕಲ್ಲು ಹೊಡೆಯುವ ಪ್ರವೃತ್ತಿ ಮುಸ್ಲಿಮರಿಗೆ ಯಾಕೆ ಬರುತ್ತೆ? ಹಿಂದೂಗಳು ಕೈಯಲ್ಲಿ ಕಲ್ಲು ಹಿಡಿದುಕೊಂಡರೆ ನಿಮ್ಮ ಕಥೆ ಏನು ಆಗುತ್ತೆ? ನ್ಯೂಕ್ಲಿಯರ್ ಬಾಂಬ್ ಮಾಡಿದ ಹಿಂದೂಗಳಿಗೆ ಪೆಟ್ರೋಲ್ ಬಾಂಬ್ ಮಾಡೋಕೆ ಬರಲ್ವಾ ಎಂದು ಪ್ರತಾಪ್ ಸಿಂಹ ಮಾತನಾಡಿದ್ದರು. ಟಾಂಗಾಗಳು, ಗುಜರಿಗಳು ಮಾಡುವ ಕೆಲಸವನ್ನು ಕ್ಷಣ ಮಾತ್ರದಲ್ಲಿ ಹಿಂದೂಗಳಿಗೆ ಮಾಡಲು ಬರುತ್ತದೆ ಎಂದಿದ್ದರು. ಧಾರ್ಮಿಕ ನಂಬಿಕೆಗಳಿಗೆ ಅವಮಾನಗೊಳಿಸಿ ದ್ವೇಷ ಭಾವನೆಯಿಂದ ಮಾತನಾಡಿದ್ದಾರೆ ಎಂದು ಆರೋಪಿಸಿ ಶಹಾಪುರ ಠಾಣೆಯಲ್ಲಿ ಕೇಸ್ ದಾಖಲು ಮಾಡಲಾಗಿದೆ. ಮಾಜಿ ಸಂಸದ ಪ್ರತಾಪ್ ಸಿಂಹ ಸೇರಿ 5 ಜನರ ವಿರುದ್ಧ ಕೇಸ್ ದಾಖಲಿಸಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ