ನ್ಯೂಸ್ ನಾಟೌಟ್ : ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯಯ್ಯ ವಿರುದ್ಧ ಎಫ್ಐಆರ್ ದಾಖಲಿಸಿ ತನಿಖೆ ನಡೆಸುವಂತೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
6 ವಾರಗಳಲ್ಲಿ ತನಿಖೆ ನಡೆಸಬೇಕೆಂದು ಮೈಸೂರು ಲೋಕಾಯುಕ್ತ ಎಸ್ಪಿ ಗೆ ಕೋರ್ಟ್ ಆದೇಶಿಸಿದೆ.
ಮುಡಾ (ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ – MUDA) ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ನಿನ್ನೆ(ಸೆ.25) ಹೈಕೋರ್ಟ್ ನಲ್ಲೂ ಹಿನ್ನಡೆಯಾಗಿತ್ತು, ತನಿಖೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿರುವ ರಾಜ್ಯಪಾಲರ ಆದೇಶವನ್ನು ಎತ್ತಿ ಹಿಡಿದ ಹೈಕೋರ್ಟ್ ಸಿದ್ದರಾಮಯ್ಯ ಸಲ್ಲಿಸಿದ್ದ ರಿಟ್ ಅರ್ಜಿಯನ್ನು ವಜಾಗೊಳಿಸಿತ್ತು.
ಮುಡಾದಲ್ಲಿ ಪ್ರಭಾವ ಬಳಸಿ ಭಾರೀ ಹಗರಣ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಮೂಲದ ಸ್ನೇಹಮಯಿ ಕೃಷ್ಣ, ಮಡಿಕೇರಿಯ ಟಿಜೆ ಅಬ್ರಹಾಂ ಹಾಗೂ ಪ್ರದೀಪ್ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಮನವಿ ಮಾಡಿದ್ದರು. ಈ ಮೂರೂ ಅರ್ಜಿಗಳನ್ನು ಒಟ್ಟಿಗೆ ಸೇರಿಸಿ ಆಗಸ್ಟ್ 17 ರಂದು ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡಿದ್ದರು.
Click