ನ್ಯೂಸ್ ನಾಟೌಟ್: ಸುಳ್ಯ ಮೂಲದ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ವಿ ಸದಾನಂದ ಗೌಡ ಅವರ ಪತ್ನಿ ಡಾಟಿ ಸದಾನಂದ ಗೌಡರು ಉಸಿರಾಟದ ಸಮಸ್ಯೆಗೆ ಸಿಲುಕಿ ಮಾಲ್ ನಲ್ಲೇ ಕುಸಿದು ಬಿದ್ದಿರುವ ಘಟನೆ ಉದ್ಯಾನನಗರಿ ಬೆಂಗಳೂರಿನಲ್ಲಿ ನಡೆದಿದೆ.
ಈ ಘಟನೆ ಬೆಂಗಳೂರಿನ ನಾಗಸಂದ್ರದಲ್ಲಿರುವ ಐಕಿಯಾ ಮಾಲ್ ನಲ್ಲಿ ನಡೆದಿದೆ. ಕುಸಿದು ಬೀಳುತ್ತಿದ್ದಂತೆ ತಕ್ಷಣ ಅವರ ಕಾರು ಚಾಲಕ ಗಮನಿಸಿ ಅವರನ್ನು ತಕ್ಷಣ ಸ್ಥಳೀಯ ಆಸ್ಪತ್ರೆಯೊಂದಕ್ಕೆ ಸೇರಿಸಿ ಚಿಕಿತ್ಸೆ ನೀಡಿದ್ದಾರೆ. ಅವರನ್ನು ತೀವ್ರ ನಿಗಾ ಘಟಕದಲ್ಲಿ ಇರಿಸಿ ಚಿಕಿತ್ಸೆ ನೀಡಲಾಗಿದೆ. ಅವರು ಇದೀಗ ಚೇತರಿಸಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಆಸ್ಪತ್ರೆಗೆ ಡಿವಿ ಸದಾನಂದ, ದಾಸರಹಳ್ಳಿ ಶಾಸಕ ಮುನಿರಾಜು ಸೇರಿದಂತೆ ಹಲವಾರು ಮಂದಿ ಆಸ್ಪತ್ರೆಗೆ ಆಗಮಿಸಿದರು. ಅಧಿಕ ರಕ್ತದೊತ್ತಡ ಮತ್ತು ಶುಗರ್ ಅಂಶದಿಂದ ಏರು ಪೇರು ಸಂಭವಿಸಿದೆ ಎಂದು ತಿಳಿದು ಬಂದಿದೆ. ಸದ್ಯ ಅವರು ಡಿಸ್ಚಾರ್ಜ್ ಆಗಿ ಮನೆಗೆ ತೆರಳಿದ್ದಾರೆ ಎನ್ನಲಾಗಿದೆ.