ನ್ಯೂಸ್ ನಾಟೌಟ್ : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP)ಗೆ ಸೇರಿದ ಮಲ್ಲೇಶ್ವರಂನ ರಾಜಶೇಖರ್ ಆಟದ ಮೈದಾನದಲ್ಲಿ ನಿನ್ನೆ(ಸೆ.22) ಭಾನುವಾರ ಸಂಜೆ 4:30ರ ಸುಮಾರಿಗೆ ಕಬ್ಬಿಣದ ಗೇಟ್ ಮುರಿದು ಬಿದ್ದು ಮೃತಪಟ್ಟ 10 ವರ್ಷದ ಬಾಲಕ ನಿರಂಜನ್ ಕುಟುಂಬಕ್ಕೆ 10 ಲಕ್ಷ ರೂಪಾಯಿ ಪರಿಹಾರವನ್ನು ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದ್ದಾರೆ.
ಬೆಂಗಳೂರಿನಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಮೃತ ಬಾಲಕನ ಕುಟುಂಬಕ್ಕೆ ರಾಜ್ಯ ಸರ್ಕಾರ, ಬಿಬಿಎಂಪಿಯಿಂದ 5 ಲಕ್ಷ ರೂಪಾಯಿ ಮತ್ತು ಗಾಂಧಿನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯಿಂದ 5 ಲಕ್ಷ ರೂಪಾಯಿ ಸೇರಿ ಒಟ್ಟು 10 ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಆಟದ ಮೈದಾನದ ಸಮಸ್ಯೆಯನ್ನು ಪರಿಶೀಲಿಸಲು ಸಮಿತಿಯನ್ನು ರಚಿಸಲಾಗುತ್ತಿದ್ದು, ಒಂದು ವಾರದೊಳಗೆ ವರದಿಯನ್ನು ಸಲ್ಲಿಸಲು ಕೇಳಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದ್ದಾರೆ.
ಘಟನೆಯ ನಂತರ, ಬಿಬಿಎಂಪಿಯು ವಲಯದಾದ್ಯಂತ ಎಚ್ಚರಿಕೆ ವಹಿಸಿದೆ. ಸರಿಯಾದ ನಿರ್ವಹಣೆಯನ್ನು ಖಚಿತಪಡಿಸಿಕೊಳ್ಳಲು, ಹಳೆಯ ಮತ್ತು ಹಾನಿಗೊಳಗಾದ ಕಬ್ಬಿಣದ ಗೇಟ್ಗಳನ್ನು ತೆಗೆದುಹಾಕಲು, ಮುರಿದ ಬೇಲಿಯನ್ನು ಸರಿಪಡಿಸಲು, ತೂಗಾಡುತ್ತಿರುವ ಅಪಾಯಕಾರಿ ಕೇಬಲ್ಗಳು ಯಾವುದಾದರೂ ಇದ್ದರೆ ತೆಗೆದುಹಾಕಿ ಭದ್ರತೆಯನ್ನು ನಿಯೋಜಿಸಲು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದೆ.
Click