ನ್ಯೂಸ್ ನಾಟೌಟ್: ಸರ್ಕಾರಿ ಶಾಲೆಯೊಂದರಲ್ಲಿ ವಿದ್ಯಾರ್ಥಿನಿಯರು ಬಿಯರ್ ಕುಡಿಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದ್ದು, ಶಿಕ್ಷಣ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಮಂಗಳವಾರ(ಸೆ.10) ತಿಳಿಸಿದ್ದಾರೆ.
ಛತ್ತೀಸ್ಗಢದ ಬಿಲಾಸ್ಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಮಸ್ತೂರಿ ಪ್ರದೇಶದ ಭಟಚೌರಾ ಗ್ರಾಮದ ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಜುಲೈ 29 ರಂದು ಈ ಘಟನೆ ನಡೆದಿದೆ, ಅದರ ವಿಡಿಯೋ ಇತ್ತೀಚೆಗೆ ವೈರಲ್ ಆಗಿದ್ದು, ಈ ಬಗ್ಗೆ ತನಿಖೆಗೆ ಸೆ.9ರಂದು ಆದೇಶಿಸಲಾಗಿದೆ.
ಘಟನೆಯ ಕುರಿತು ತನಿಖೆಗೆ ಮೂವರು ಸದಸ್ಯರ ಸಮಿತಿಯನ್ನು ರಚಿಸಲಾಗಿದೆ ಮತ್ತು ತಂಡವು ಸೋಮವಾರ ಸಂಬಂಧಪಟ್ಟ ವಿದ್ಯಾರ್ಥಿನಿಯರ ಮತ್ತು ಶಿಕ್ಷಕರ ಹೇಳಿಕೆಗಳನ್ನು ದಾಖಲಿಸಿದೆ ಎನ್ನಲಾಗಿದೆ.
ವಿಡಿಯೋ ಮಾಡುವಾಗ ಮೋಜಿಗಾಗಿ ಬಿಯರ್ ಬಾಟಲಿಗಳನ್ನು ಹಿಡಿದಿದ್ದಾರೆ. ಆದರೆ ಪಾನೀಯ ಸೇವಿಸಿಲ್ಲ ಎಂದು ವಿದ್ಯಾರ್ಥಿನಿಯರು ತನಿಖಾ ತಂಡಕ್ಕೆ ತಿಳಿಸಿದ್ದಾರೆ ಎನ್ನಲಾಗಿದೆ.
ಶಾಲೆಗಳಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ನೋಡಿಕೊಳ್ಳಲು ಪ್ರಾಂಶುಪಾಲರು ಮತ್ತು ಸಂಸ್ಥೆಯ ಮುಖ್ಯಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ, ಸಂಬಂಧಪಟ್ಟ ಬಾಲಕಿಯರ ಪೋಷಕರಿಗೆ ನೋಟಿಸ್ ಕಳುಹಿಸಲಾಗುವುದು ಎಂದು ಅಧಿಕಾರಿ ತಿಳಿಸಿದ್ದಾರೆ.
Click