ನ್ಯೂಸ್ ನಾಟೌಟ್: ಹೆಂಡತಿಯ ಶೀಲ ಶಂಕಿಸಿ ಪತಿ ಆಕೆಯನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮಾತ್ರವಲ್ಲದೇ, ಸಾಕ್ಷ್ಯ ನಾಶಕ್ಕೆಂದು ಮೃತದೇಹವನ್ನು ತಡರಾತ್ರಿ ಸುಟ್ಟು ಹಾಕಿದ ಘಟನೆ ಉತ್ತರ ಕರ್ನಾಟಕ ಕೊಪ್ಪಳ ಜಿಲ್ಲೆಯ ಅರಕೇರಿ ಗ್ರಾಮದಲ್ಲಿ ನಡೆದಿದೆ.
ಸೆಪ್ಟೆಂಬರ್ 7 ಕ್ಕೆ ತಡ ರಾತ್ರಿ ಈ ಘಟನೆ ನಡೆದಿದ್ದು, ಗೀತಾಳನ್ನು ದೇವರೆಡ್ಡೆಪ್ಪ ಮಲ್ಲಾರೆಡ್ಡೆಪ್ಪ ಭಾವಿಕಟ್ಟಿ ಎಂಬಾತ ಕೊಲೆಗೈದಿದ್ದಾನೆ. ಮಕ್ಕಳಾಗದ ಕಾರಣ ಜಗಳ ಮಾಡಿ ಮನೆಯ ಬೆಡ್ ರೂಮಿನಲ್ಲಿ ಕಟ್ಟಿಗೆಯಿಂದ ಮುಖಕ್ಕೆ ಹೊಡೆದು ಗಾಯಗೊಳಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.
ಬಳಿಕ ತಾನು ಹಾಗೂ ಕುಟುಂಬದೊಂದಿಗೆ ಸೇರಿಕೊಂಡು ಕೊಲೆ ಮಾಡಿದ ವಿಷಯವನ್ನು ಮುಚ್ಚಿಟ್ಟು ಮೃತಳ ತಂದೆ, ತಾಯಿಗೆ ಸುಳ್ಳು ಹೇಳಿ ಮೃತ ದೇಹವನ್ನು ಅವಸರದಿಂದ ಸ್ಮಶಾನಕ್ಕೆ ತೆಗೆದುಕೊಂಡು ಹೋಗಿ ಬೆಂಕಿ ಹಾಕಿ ಸುಟ್ಟಿದ್ದಾರೆ. ಕೊಲೆಗೈದ ಆರೋಪಿ ಹಾಗೂ ಆತನ ತಂದೆಯನ್ನು ಪೊಲೀಸರು ಬಂಧಿಸಿದ್ದಾರೆ.
Click