- +91 73497 60202
- [email protected]
- November 22, 2024 1:45 PM
ನ್ಯೂಸ್ ನಾಟೌಟ್: ಇಲ್ಲೊಬ್ಬ ವ್ಯಕ್ತಿ ಓಣಂ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಇಡ್ಲಿ ತಿನ್ನುವ ಕಾಂಪಿಟೇಶನ್‌ನಲ್ಲಿ ನಾನೇ ಗೆಲ್ಬೇಕು ಎಂದು ಒಮ್ಮೆಗೆ ಮೂರು ಇಡ್ಲಿಯನ್ನು ಗಬಗಬನೆ ನುಂಗಲು ಹೋಗಿದ್ದು, ಆ ಸಂದರ್ಭದಲ್ಲಿ ಇಡ್ಲಿ ಗಂಟಲಲ್ಲಿ ಸಿಲುಕಿ ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಈ ಘಟನೆ ಕೇರಳದ ಪಾಲಕ್ಕಾಡ್‌ನಲ್ಲಿ ನಡೆದಿದ್ದು, ಸೆಪ್ಟೆಂಬರ್ 14 ಶನಿವಾರದಂದು ಇಲ್ಲಿನ ವಳಯಾರ್‌ನಲ್ಲಿ ಓಣಂ ಹಬ್ಬದ ಪ್ರಯುಕ್ತ ಸ್ಥಳೀಯ ಸಂಘಟನೆಯೊಂದು ಇಡ್ಲಿ ತಿನ್ನುವಂತಹ ಸ್ಪರ್ಧೆಯನ್ನು ಏರ್ಪಡಿಸಿತ್ತು. ಈ ಸ್ಪರ್ಧೆಯಲ್ಲಿ ಭಾಗವಹಿಸಿದ್ದ ವ್ಯಕ್ತಿಯೊಬ್ಬರು ಗಬಗಬನೇ ಇಡ್ಲಿಯನ್ನು ತಿನ್ನಲು ಹೋಗಿ ಉಸಿರುಗಟ್ಟಿ ಮೃತಪಟ್ಟಿದ್ದಾರೆ. ಅರ್ಜೆಂಟ್ ಅಲ್ಲಿ ತಿನ್ನುವಾಗ ಇಡ್ಲಿ ಗಂಟಲಲ್ಲಿ ಸಿಕ್ಕಿ ಹಾಕಿಕೊಂಡಿದ್ದು, ಇದರಿಂದ ಆ ವ್ಯಕ್ತಿ ಉಸಿರಾಡಲು ಪರದಾಡಿದ್ದಾರೆ. ತಕ್ಷಣ ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ದುರಾದೃಷ್ಟವಶಾತ್ ಆ ವ್ಯಕ್ತಿ ಮೃತಪಟ್ಟಿದ್ದಾರೆ. ಮೃತ ವ್ಯಕ್ತಿಯನ್ನು ಪಾಲಕ್ಕಾಡ್‌ನ ಅಲಮರಮ್ ನಿವಾಸಿ ಸುರೇಶ್ (49) ಎಂದು ಗುರುತಿಸಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಯಲ್ಲಿ ಇಡಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ