ನ್ಯೂಸ್ ನಾಟೌಟ್ : ಸರ್ಕಾರಿ ವಸತಿ ಶಾಲೆಯೊಂದರಲ್ಲಿ 2014ರಿಂದ 2022ರ ವರೆಗೆ 21 ಮಕ್ಕಳ ಮೇಲೆ ಲೈಂಗಿಕ ದೌರ್ನಜ್ಯ ಎಸಗಿದ್ದ ಹಾಸ್ಟೆಲ್ ವಾರ್ಡನ್ ಯುಮ್ಕೆನ್ ಬಾಗ್ರಾ ಎಂಬಾತನಿಗೆ ಅರುಣಾಚಲ ಪ್ರದೇಶದ ವಿಶೇಷ ನ್ಯಾಯಾಲಯ ಗುರುವಾರ(ಸೆ.26) ಗಲ್ಲು ಶಿಕ್ಷೆ ವಿಧಿಸಿದೆ. ಘಟನೆ ಗುವಾಹಟಿಯ ಸರ್ಕಾರಿ ವಸತಿ ಶಾಲೆಯೊಂದರಲ್ಲಿ ನಡೆದಿತ್ತು.
ಅಲ್ಲದೇ ಮಕ್ಕಳು ದೂರು ನೀಡಿದರೂ ಅಪರಾಧವನ್ನು ವರದಿ ಮಾಡುವಲ್ಲಿ ವಿಫಲರಾದ ಮಾಜಿ ಮುಖ್ಯಶಿಕ್ಷಕ ಸಿಂಗ್ತುಂಗ್ ಯೋರ್ಪೆನ್ ಮತ್ತು ಹಿಂದಿ ಶಿಕ್ಷಕಿ ಮಾರ್ಬೊಮ್ ನ್ಗೊಮ್ದಿರ್ ಅವರಿಗೆ ಪೋಕ್ಸೊ ಕಾಯ್ದೆ ಅಡಿ 20 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ವಿಶೇಷ ನ್ಯಾಯಾಧೀಶರಾದ ಜಾವೆಪ್ಲು ಚೈ ತೀರ್ಪು ಪ್ರಕಟಿಸಿದ್ದಾರೆ.
ಭಾರತೀಯ ದಂಡ ಸಂಹಿತೆ (IPC) ಮತ್ತು POCSO ಕಾಯ್ದೆ ಅಡಿಯಲ್ಲಿ ಮೂವರನ್ನು ದೋಷಿಗಳೆಂದು ಘೋಷಿಸಿದ್ದಾರೆ. ವಿದ್ಯಾರ್ಥಿಗಳು ದೂರು ನೀಡಿದರೂ ಸಹ ಶಾಲೆಯ ಖ್ಯಾತಿಗೆ ಧಕ್ಕೆಯಾಗುತ್ತದೆ ಎಂಬ ಕಾರಣಕ್ಕೆ ಮೌನವಾಗಿರುವಂತೆ ಕೇಳಿಕೊಂಡಿದ್ದರು ಎಂಬ ಕಾರಣಕ್ಕೆ ಶಿಕ್ಷೆ ವಿಧಿಸಲಾಗಿದೆ ಎಂದು ನ್ಯಾಯಾಧೀಶರು ಉಲ್ಲೇಖಿಸಿದ್ದಾರೆ.
ಇನ್ನಿಬ್ಬರು ಆರೋಪಿಗಳಾದ ಅದೇ ಶಾಲೆಯ ಇನ್ನೋರ್ವ ಶಿಕ್ಷಕ ತಾಜಂಗ್ ಯೋರ್ಪೆನ್ ಮತ್ತು ಹಾಸ್ಟೆಲ್ ವಾರ್ಡನ್ ಪರಿಚಯಸ್ತ ಡೇನಿಯಲ್ ಪರ್ಟಿನ್ ಅವರನ್ನು ಪ್ರಕರಣದಿಂದ ಖುಲಾಸೆಗೊಳಿಸಲಾಗಿದೆ.
ವಾರ್ಡನ್ ಮಾದಕ ದ್ರವ್ಯ ಸೇವಿಸಿ ವಿದ್ಯಾರ್ಥಿಗಳ ಮೇಲೆ ಹಲ್ಲೆ ಮತ್ತು ಲೈಂಗಿಕ ಕಿರುಕುಳ ನೀಡಿದ್ದ. ಹಲ್ಲೆ ನಡೆಸಿರುವ ಬಗ್ಗೆ ಯಾರಿಗೂ ಹೇಳದಂತೆ ಬೆದರಿಕೆ ಕೂಡ ಹಾಕಿದ್ದ. ಇದರಿಂದ 6 ಮಕ್ಕಳು ಆತ್ಮಹತ್ಯೆಗೆ ಯತ್ನಿಸಿದ್ದರು ಎಂಬುದನ್ನು ಎಸ್ಐಟಿ ಚಾರ್ಜ್ಶೀಟ್ನಲ್ಲಿ ತಿಳಿಸಲಾಗಿತ್ತು.
Click