ನ್ಯೂಸ್ ನಾಟೌಟ್: ಜಮ್ಮು ಮತ್ತು ಕಾಶ್ಮೀರದಲ್ಲಿ (Jammu & Kashmir) ವಿಧಾನಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದು(ಸೆ.18) ನಡೆಯಲಿದ್ದು, ರಾಜ್ಯದ 90 ಕ್ಷೇತ್ರಗಳ ಪೈಕಿ 24 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
ಜಮ್ಮು ಮತ್ತು ಕಾಶ್ಮೀರವು 2014 ರ ಬಳಿಕ ತನ್ನ ಮೊದಲ ಅಸೆಂಬ್ಲಿ ಚುನಾವಣೆಯನ್ನು ನೋಡುತ್ತದೆ. 2019 ರಲ್ಲಿ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ 370 ನೇ ವಿಧಿಯನ್ನು ತೆಗೆದುಹಾಕಿದ ನಂತರ ರಾಜ್ಯದಲ್ಲಿ ಬಾರಿಗೆ ಚುನಾವಣೆ ನಡೆಯುತ್ತಿದೆ.
ವಿಧಾನಸಭೆ ಚುನಾವಣೆಯನ್ನು ಕೇಂದ್ರಾಡಳಿತ ಪ್ರದೇಶವಾಗಿ ನೋಡುತ್ತಿರುವುದು ಕೂಡ ಇದೇ ಮೊದಲು. 370 ನೇ ವಿಧಿಯನ್ನು ರದ್ದುಗೊಳಿಸಿದಾಗ, ರಾಜ್ಯವನ್ನು ಜಮ್ಮು-ಕಾಶ್ಮೀರ ಮತ್ತು ಲಡಾಖ್ ಕೇಂದ್ರಾಡಳಿತ ಪ್ರದೇಶಗಳಾಗಿ ವಿಂಗಡಿಸಲಾಯಿತು.
ಮೋದಿ, ಅಮಿತ್ ಶಾ ನೇತೃತ್ವದ ಬಿಜೆಪಿ, ಕಾಂಗ್ರೆಸ್ ಮತ್ತು ನ್ಯಾಷನಲ್ ಕಾನ್ಫರೆನ್ಸ್ ಮೈತ್ರಿಕೂಡ, ಮೆಹಬೂಬಾ ಮುಫ್ತಿಯವರ ಪೀಪಲ್ಸ್ ಡೆಮಾಕ್ರಟಿಕ್ ಪಾರ್ಟಿ ಮತ್ತು ಇತರ ಪಕ್ಷಗಳು ಅಬ್ದುಲ್ ಘನಿ ಲೋನ್ ಅವರ ಪೀಪಲ್ಸ್ ಕಾನ್ಫರೆನ್ಸ್, ಗುಲಾಮ್ ನಬಿ ಆಜಾದ್ ಅವರ ಡೆಮಾಕ್ರಟಿಕ್ ಪ್ರೋಗ್ರೆಸಿವ್ ಆಜಾದ್ ಪಾರ್ಟಿ ಮತ್ತು ಅಲ್ತಾಫ್ ಬುಖಾರಿಯವರ ಅಪ್ನಿ ಪಾರ್ಟಿ ಚುನಾವಣೆಯಲ್ಲಿ ಸ್ಪರ್ಧಿಸಲಿವೆ.
Click