ನ್ಯೂಸ್ ನಾಟೌಟ್: ರಾಷ್ಟ್ರೀಯ ಹೆದ್ದಾರಿ ಬಳಿ ಮಹಿಳೆಯ ರುಂಡವಿಲ್ಲದ ಬೆತ್ತಲೆ ಶವ ಪತ್ತೆಯಾದ ಘಟನೆ ಉತ್ತರ ಪ್ರದೇಶದ ಕಾನ್ಪುರ ಪಟ್ಟಣದಲ್ಲಿ ನಡೆದಿದೆ.
ಮೃತ ಮಹಿಳೆಯ ಗುರುತು ಪತ್ತೆಗಾಗಿ ತುಂಡರಿಸಿದ ತಲೆಗಾಗಿ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಬುಧವಾರ(ಸೆ.11) ಕಾನ್ಪುರ ಬಳಿಯ ಗುಜೈನಿ ಎಂಬಲ್ಲಿ ಹೆದ್ದಾರಿ ಬದಿಯಲ್ಲಿ ಶವ ಪತ್ತೆಯಾಗಿದೆ. ಮಹಿಳೆಯ ಗುರುತು ಪತ್ತೆ ಹಚ್ಚಲು ಸಮೀಪದ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಲಾಗುತ್ತಿದೆ ಎನ್ನಲಾಗಿದೆ.
ಬುಧವಾರ ಮುಂಜಾನೆ ಕೊಲೆಯಾದ ಮಹಿಳೆಯನ್ನೇ ಹೋಲುವವರೊಬ್ಬರು ಹೆದ್ದಾರಿ ಬದಿಯಲ್ಲಿ ನಡೆದುಕೊಂಡು ಹೋಗುತ್ತಿವುರುವುದು ಸಿಸಿಟಿವಿಯಲ್ಲಿ ಕಂಡು ಬಂದಿದೆ. ಮೃತದೇಹ ಅಂದೇ ಬೆಳಗ್ಗೆ ಪತ್ತೆಯಾಗಿದೆ. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ .
ಕೊಲೆ ಮಾಡಿದ ಬಳಿಕ ಮಹಿಳೆಯ ರುಂಡವನ್ನು ಬೇರ್ಪಡಿಸಿರುವ ಸಾಧ್ಯತೆ ಇದೆ. ಆಕೆಯ ಮೇಲೆ ಅತ್ಯಾಚಾರ ನಡೆದಿರಬಹುದೇ ಎಂಬ ಬಗ್ಗೆ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ತಿಳಿದು ಬರಲಿದೆ.
Click