ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾದ ತರುಣ್‌, ಸೋನಲ್‌..! ಇಲ್ಲಿದೆ ಸಂಪೂರ್ಣ ಮಾಹಿತಿ

ನ್ಯೂಸ್‌ ನಾಟೌಟ್‌: ಖ್ಯಾತ ನಿರ್ದೇಶಕ ತರುಣ್ ಸುಧೀರ್ ನಟಿ ಸೋನಲ್ ಮೊಂಥೆರೋ ಮಂಗಳೂರಿನಲ್ಲಿ ಕ್ರಿಶ್ಚಿಯನ್ ಸಂಪ್ರದಾಯದಂತೆ ಮತ್ತೆ ಮದುವೆಯಾಗಿದ್ದಾರೆ.ಕ್ರಿಶ್ಚಿಯನ್ ಸಂಪ್ರದಾಯದಂತೆ ತರುಣ್ ಸುಧೀರ್ ಹಾಗೂ ಸೋನಲ್‌ ಉಂಗುರ ಬದಲಾಯಿಸಿಕೊಂಡ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ. ಆಗಸ್ಟ್​ 11 ರಂದು ಬೆಂಗಳೂರಿನ ಪೂರ್ಣಿಮಾ ಪ್ಯಾಲೆಸ್‌ನಲ್ಲಿ ಅದ್ಧೂರಿಯಾಗಿ ಹಿಂದೂ ಸಂಪ್ರದಾಯದಂತೆ ಕುಟುಂಬಸ್ಥರು, ಗುರು, ಹಿರಿಯರ ಸಮ್ಮುಖದಲ್ಲಿ ಈ ನವ ಜೋಡಿ ಸಪ್ತಪದಿ ತುಳಿದಿತ್ತು. ಬೆನ್ನಲ್ಲೇ ಈ ಬ್ಯೂಟಿಫುಲ್ ಜೋಡಿ ಮತ್ತೊಮ್ಮೆ ವಿವಾಹವಾಗಿದೆ.ಸೆಲೆಬ್ರೆಷನ್​ನಲ್ಲಿ ನವವಧು ಸೋನಾಲ್ ಗೋಲ್ಡ್​ ಕಲರ್ ಡ್ರೆಸ್ ಧರಿಸಿದ್ದರು. ಚರ್ಚ್​ ವೆಡ್ಡಿಂಗ್ ಬಳಿಕ ಸ್ಟಾರ್​ ಜೋಡಿ ಮಂಗಳೂರಿನಲ್ಲಿ ಅದ್ಧೂರಿ ರೆಸೆಪ್ಷನ್‌ ಸಹ ಮಾಡಿಕೊಂಡಿದ್ದಾರೆ. Click