- +91 73497 60202
- [email protected]
- November 24, 2024 4:48 PM
ಮಂಗಳೂರು: ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ..! ವಿಶ್ವ ಹಿಂದೂ ಪರಿಷತ್ ಕಾರ್ಯಕರ್ತರಿಂದ ‘ಬಿಸಿ ರೋಡ್ ಚಲೋ’ ಜಾಥಾ
ನ್ಯೂಸ್ ನಾಟೌಟ್: ಮಂಗಳೂರಿನ ಹೊರವಲಯದ ಸುರತ್ಕಲ್ ಬಳಿಯ ಕಾಟಿಪಳ್ಳ ಎಂಬಲ್ಲಿ ನಿನ್ನೆ ಭಾನುವಾರ(ಸೆ.15) ರಾತ್ರಿ ಮಸೀದಿ ಮೇಲೆ ಕಲ್ಲು ತೂರಾಟ ನಡೆದಿದೆ.ಕಾಟಿಪಳ್ಳ 3ನೇ ಬ್ಲಾಕ್ ನ ಬದ್ರಿಯಾ ಪುರಸಭೆ ಮೇಲೆ ಕಲ್ಲೆಸೆತ ನಡೆದಿದೆ. ಕಲ್ಲು ತೂರಾಟದಿಂದ ಮಸೀದಿಯ ಗಾಜು ಪುಡಿಯಾಗಿದೆ. ಈದ್ ಮಿಲಾದ್ ಮುನ್ನಾ ದಿನವೇ ಘಟನೆ ನಡೆದಿದ್ದು, ಪರಿಸ್ಥಿತಿ ಉದ್ವಿಗ್ನವಾಗಿದೆ. ರಾತ್ರಿ 10.30ರ ಸುಮಾರಿಗೆ 2 ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದಾರೆ ಎನ್ನಲಾಗಿದೆ. ಮಸೀದಿಗೆ ಸದ್ಯ ಬಿಗಿ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿದೆ. ಪ್ರಚೋದನಕಾರಿ ಹೇಳಿಕೆ ನೀಡಿದ ವಿಚಾರವಾಗಿ ವಿಹೆಚ್ ಪಿ ಹಾಗೂ ಬಜರಂಗದಳ ಮುಖಂಡ ಶರಣ್ ಪಂಪ್‌ವೆಲ್ ಮತ್ತು ಪುನೀತ್ ಅತ್ತಾವರ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಸಾಮಾಜಿಕ ಜಾಲತಾಣ ಮೂಲಕ ವಿಡಿಯೊ ಹರಿಬಿಟ್ಟಿದ್ದ ಪುನೀತ್ ಅತ್ತಾವರ ವಿರುದ್ಧ ಮಂಗಳೂರು ಸೆನ್ ಕ್ರೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಾಮಾಜಿಕ ಜಾಲತಾಣಗಳ ಮೇಲೆ ನಿಗಾ ವಹಿಸಿರುವ ಮಂಗಳೂರು ಪೊಲೀಸರು, ಪ್ರಚೋದನಾಕಾರಿ ಹೇಳಿಕೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳುತ್ತಿದ್ದಾರೆ. ಮಂಗಳೂರಿನಲ್ಲಿ ವಾತಾವರಣ ಪ್ರಕ್ಷುಬ್ಧಗೊಂಡಿದೆ. ಈದ್ ಮಿಲಾದ್ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿಸಿ ರೋಡ್ನಲ್ಲಿ ಇಂದು (ಸೆ.16) ಮೆರವಣಿಗೆ ನಡೆಯಲಿವೆ. ರವಿವಾರ ಸಂಜೆ ಕೆಲ ಮುಸ್ಲಿಂ ಮುಖಂಡರು ಪ್ರಚೋದನಕಾರಿ ಹೇಳಿಕೆ ನೀಡಿದ್ದರು. ಇದರಿಂದ ಆಕ್ರೋಶಗೊಂಡ ಭಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್ ಮುಖಂಡರು ಬಿ.ಸಿ.ರೋಡ್ ಚಲೋ ಕರೆ ನೀಡಿದ್ದಾರೆ ಎನ್ನಲಾಗಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ