- +91 73497 60202
- [email protected]
- November 22, 2024 8:40 PM
ನ್ಯೂಸ್ ನಾಟೌಟ್: ತಮಿಳುನಾಡು ಮೂಲದ ಅಯ್ಯಪ್ಪ(20) ತನ್ನ ತಾಯಿ ಜತೆಗೆ ಬೆಂಗಳೂರಲ್ಲೇ ಬಂದು ನೆಲೆಸಿದ್ದ. ಥಣಿಸಂದ್ರದಲ್ಲಿ ಸಣ್ಣದೊಂದು ಮನೆ ಮಾಡಿಕೊಂಡು ವಾಸವಿದ್ದರು. ಆರು ವರ್ಷಗಳ ಹಿಂದಷ್ಟೇ ಹುಡುಗನ ತಂದೆ ತೀರಿ ಹೋಗಿದ್ದರು. ತಾಯಿ ಹೌಸ್ ಕೀಪಿಂಗ್ ಕೆಲಸ ಮಾಡಿಕೊಂಡು ಮಗನನ್ನು ಓದಿಸುತ್ತಿದ್ದರು. ಖಾಸಗಿ ಕಾಲೇಜಿನಲ್ಲಿ ಎರಡನೇ ವರ್ಷದ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಅಯ್ಯಪ್ಪಗೆ ಇತ್ತೀಚಿಗೆ ಬೈಕ್ ಕ್ರೇಜ್ ಹೆಚ್ಚಾಗಿತ್ತು. ಬೈಕ್ ಕೊಡಿಸುವಂತೆ ಅಮ್ಮನ ಹಿಂದೆ ಬಿದ್ದಿದ್ದ, ಆದರೆ ತಾಯಿಗೆ ಬಡತನ, ಬೈಕ್ ಕೊಡಿಸಲಿಲ್ಲ ಎಂಬ ಕಾರಣಕ್ಕೆ ಮನೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸೆಪ್ಟೆಂಬರ್ 11 ರ ಮಂಗಳವಾರ ಯುವಕನ ತಾಯಿ ಬೆಳಗ್ಗೆ 6 ಗಂಟೆಗೆ ಕೆಲಸಕ್ಕೆಂದು ಹೋಗಿದ್ದರು. ಸಂಜೆ 4:30ರ ಸುಮಾರಿಗೆ ಮನೆಗೆ ವಾಪಸ್ ಆಗಿದ್ದ ಅವರಿಗೆ ಶಾಕ್ ಕಾದಿತ್ತು. ಎದೆ ಎತ್ತರಕ್ಕೆ ಬೆಳೆದು ನಿಂತಿದ್ದ ಮಗ ನೇಣು ಕುಣಿಕೆಯಲ್ಲಿ ನೇತಾಡ್ತಿದ್ದ. ಇದರಿಂದ ಗಾಬರಿಗೊಂಡ ತಾಯಿ ಸಂಬಂಧಿಕರಿಗೆ ತಿಳಿಸಿದ್ದಾರೆ. ಸಂಬಂಧಿಕರು ಬಂದು ಹೆಣ್ಣೂರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಮೃತದೇಹ ಕೆಳಗೆ ಇಳಿಸಿ ಮರಣೋತ್ತರ ಪರೀಕ್ಷೆಗಾಗಿ ಅಂಬೇಡ್ಕರ್ ಆಸ್ಪತ್ರೆಗೆ ರವಾನಿಸಿದ್ದಾರೆ.ತನ್ನ ತಾಯಿಗೆ ಕಳೆದ ಎರಡು ತಿಂಗಳಿಂದ ಬೈಕ್ ಬೇಕು ಎಂದು ಕೇಳುತ್ತಲೇ ಇದ್ದ. ಆದರೆ ಒಬ್ಬಂಟಿಯಾಗಿ ದುಡಿಯುತ್ತಿದ್ದ ಆ ತಾಯಿಗೆ ಅಷ್ಟು ಹಣ ಹೊಂದಿಸುವುದು ಕಷ್ಟವಾಗಿತ್ತು. ಹಾಗಾಗಿ ಸ್ವಲ್ಪ ದಿನ ಕಾಯುವಂತೆ ಹೇಳಿದ್ದರು. ಸಾಲ ಮಾಡಿ 50 ಸಾವಿರ ಹೊಂದಿಸಿದ್ದರು, ಆದರೆ ಇದು ಮಗನಿಗೆ ಗೊತ್ತಿರಲಿಲ್ಲ ಎನ್ನಲಾಗಿದೆ. ಆತ ದುಡುಕಿ ಅಮ್ಮನನ್ನು ಅನಾಥ ಮಾಡಿದ್ದಾನೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ