- +91 73497 60202
- [email protected]
- November 22, 2024 7:54 AM
ನ್ಯೂಸ್ ನಾಟೌಟ್: ಗುತ್ತಿಗೆದಾರನಿಗೆ ಜೀವ ಬೆದರಿಕೆ, ಜಾತಿ ನಿಂದನೆ ಆರೋಪದಡಿ ಬಂಧನಕ್ಕೆ ಒಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಎರಡು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿ 82ನೇ ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿದೆ. ಆಂಧ್ರಪ್ರದೇಶಕ್ಕೆ ತೆರಳುತ್ತಿದ್ದಾಗ ಕೋಲಾರದ (Kolar) ಮುಳಬಾಗಿಲು ತಾಲೂಕಿನ ನಂಗಲಿ ಬಳಿ ಶನಿವಾರ(ಸೆ.14) ಸಂಜೆ ಶಾಸಕರನ್ನು ಬೆಂಗಳೂರು ಪೊಲೀಸರು ಬಂಧಿಸಿದ್ದರು. ಬಂಧಿಸಿ ಶನಿವಾರ ಸಂಜೆ ವೇಳೆಗೆ ಬೆಂಗಳೂರಿಗೆ ಕರೆತಂದಿದ್ದರು. ಅಶೋಕ ನಗರ ಠಾಣೆಗೆ ಕರೆತಂದಿದ್ದ ಇಲ್ಲಿನ ಪೊಲೀಸರು ಬಳಿಕ ಯಲಹಂಕದ ಕೋಗಿಲೆ ಕ್ರಾಸ್ ಬಳಿ ಇರುವ ನ್ಯಾಯಾಧೀಶರ ನಿವಾಸಕ್ಕೆ ಕರೆತಂದಿದ್ದರು. ಎಸಿಪಿ ಪ್ರಕಾಶ್ ನೇತೃತ್ವದ ತಂಡ ಶಾಸಕರನ್ನು ನ್ಯಾಯಾಧೀಶರ ಎದುರು ಹಾಜರುಪಡಿಸಿತ್ತು. ಈ ವೇಳೆ ಪೊಲೀಸರು ಒಂದು ವಾರ ಪೊಲೀಸ್ ಕಸ್ಟಡಿಗೆ ನೀಡುವಂತೆ ಮನವಿ ಮಾಡಿದರು. ಆದ್ರೆ ವಿಚಾರಣೆ ನಡೆಸಿದ ಬಳಿಕ, 2 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಧೀಶರು ಆದೇಶಿಸಿದ್ದಾರೆ.ಶಾಸರನ್ನು ನ್ಯಾಯಾಧೀಶರ ನಿವಾಸದಲ್ಲಿ ಹಾಜರುಪಡಿಸಿದ್ದ ವೇಳೆ ಬೆಂಬಲಿಗರೂ ಅಲ್ಲಿ ಜಮಾಯಿಸಿದ್ದರು. ಬಂಧನ ಖಂಡಿಸಿ ಸ್ಥಳದಲ್ಲೇ ಧಿಕ್ಕಾರ ಕೂಗಿದ ಘಟನೆ ನಡೆದಿದೆ.
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ