- +91 73497 60202
- [email protected]
- November 23, 2024 6:58 AM
ಶಾಸಕ ಮುನಿರತ್ನಗೆ ಜಾಮೀನು ಮಂಜೂರು..! ಪೊಲೀಸರು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆ..!
ನ್ಯೂಸ್ ನಾಟೌಟ್: ಜಾತಿನಿಂದನೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಮುನಿರತ್ನಗೆ ಇಂದು(ಸೆ.19) ಜಾಮೀನು ಸಿಕ್ಕಿದೆ. ಬುಧವಾರವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಇಂದಿಗೆ ತೀರ್ಪು ಕಾಯ್ದಿರಿಸಿತ್ತು. ಎರಡು ಲಕ್ಷ ರೂ. ಬಾಂಡ್, ಇಬ್ಬರು ಶ್ಯೂರಿಟಿ, ಪೊಲೀಸರು ವಿಚಾರಣೆಗೆ ಕರೆದಾಗ ಹಾಜರಾಗಬೇಕೆಂದು ಕೋರ್ಟ್ ಷರತ್ತು ವಿಧಿಸಿದೆ. ಜಾಮೀನು ಸಿಕ್ಕಿದರೂ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಮುನಿರತ್ನ ಅವರನ್ನು ಮತ್ತೆ ವಶಕ್ಕೆ ಪಡೆಯುವ ಸಾಧ್ಯತೆಯಿದೆ ಎನ್ನಲಾಗಿದೆ.ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, “ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ” ಎಂದು ವಾದಿಸಿದ್ದರು. “ಈಗ ಜನಾಂಗಿಯ ನಿಂದನೆ, ಪ್ರಚೋದನೆ ಎಂದೆಲ್ಲಾ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಅಟ್ರಾಸಿಟಿ ಕಾಯ್ದೆ ಅನ್ವಯವಾಗುವುದಿಲ್ಲ. ಈ ಸೆಕ್ಷನ್ ಪ್ರಕಾರ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚೆಲುವರಾಜುನೇ ನಿಜವಾದ ಆರೋಪಿ” ಎಂದು ವಾದ ಮಂಡಿಸಿದ್ದರು. ಹಾಗಾಗಿ ಇಂದು(ಸೆ.19) ಷರತ್ತು ಬದ್ಧ ಜಾಮೀನು ಮಂಜೂರಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ