- +91 73497 60202
- [email protected]
- November 22, 2024 10:12 AM
ಮುಸ್ಲಿಂ ಮನೆಯಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ..! 3 ವರ್ಷದ ಮಗನ ಆಸೆ ಈಡೇರಿಸಿ ಭಾವೈಕ್ಯತೆ ಮೆರೆದ ತಂದೆ-ತಾಯಿ
ನ್ಯೂಸ್ ನಾಟೌಟ್: ಇಲ್ಲೊಬ್ಬ ಮುಸ್ಲಿಂ ಧರ್ಮದ ವ್ಯಕ್ತಿ ತನ್ನ ಮಗನ ಆಸೆ, ಪ್ರೀತಿ, ಹಠಕ್ಕೆ ಕಟ್ಟುಬಿದ್ದು ತನ್ನ ಮನೆಯಲ್ಲಿ ಗಣೇಶ ಪ್ರತಿಷ್ಠಾಪನೆ ಮಾಡುವ ಮೂಲಕ ಭಾವೈಕ್ಯತೆಯ ಸಂದೇಶ ಸಾರಿದ ಘಟನೆ ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದಿದೆ. ಮುಸ್ಲಿಂ ಧರ್ಮದ ಮುಸ್ತಾಪ್ ಮಾಬುಸಾಬ್ ಕೋಲ್ಕಾರ ಎಂಬುವವರು ಗಣೇಶ ಚತುರ್ಥಿ ದಿನ ಹಿಂದೂ ಸಂಪ್ರದಾಯದಂತೆ ಗಣೇಶನ ಮೂರ್ತಿ ಪ್ರತಿಷ್ಠಾಪಿಸಿ ಆರಾಧಿಸಿದ್ದಾರೆ. ಮುಸ್ತಾಪ್ ಮತ್ತು ಯಾಸ್ಮಿನಾಬಾನು ದಂಪತಿಗೆ ಐವರು ಮಕ್ಕಳು. ಅವರ ಕೊನೆಯ ಮಗ 3 ವರ್ಷದ ಹಜರತಲಿಗೆ ಗಣೇಶ ದೇವರ ಮೂರ್ತಿಯೆಂದರೆ ಬಹಳ ಪ್ರೀತಿ. ದೇವರು-ಧರ್ಮ, ಜಾತಿ ಹೆಸರಿನಲ್ಲಿ ದೇಶದಲ್ಲಿ ನಡೆಯುತ್ತಿರುವ ಅರಾಜಕತೆ, ಧರ್ಮಯುದ್ದದ ಬಗ್ಗೆ ಏನೂ ಅರಿಯದ ಪುಟಾಣಿ ತಾನು ಗಣೇಶನನ್ನು ಮನೆಗೆ ತೆಗೆದುಕೊಂಡು ಹೋಗಬೇಕು. ಎಲ್ಲರಂತೆ ಪೂಜಿಸಬೇಕು, ಪಟಾಕಿ ಹೊಡೆಯಬೇಕು. ಕುಣಿದು ಕುಪ್ಪಳಿಸಬೇಕೆಂಬ ಹಂಬಲ.. ಈ ಬಗ್ಗೆ ತಂದೆ-ತಾಯಿ ಹತ್ತಿರ ಕೇಳಿ ಅತ್ತು ಕರೆದು ಹಠ ಮಾಡಿದ್ದರೂ ತಂದೆ ಹೇಗೂ ಸಮಾಧಾನ ಮಾಡಿ ಮಾತು ಮರೆಸಿದ್ದರು. ಆದರೆ ಗಣೇಶ ಚತುರ್ಥಿ ದಿನ ಎಲ್ಲರೂ ಮನೆಗೆ ಗಣೇಶ ಮೂರ್ತಿ ತರುವುದನ್ನು ಗಮನಿಸಿದ ಹಜರತಲಿ, ತನ್ನ ಅಣ್ಣನೊಂದಿಗೆ ಗಣೇಶಮೂರ್ತಿ ಮಾರಾಟ ಮಾಡುವಲ್ಲಿಗೆ ಹೋಗಿ ಗಣೇಶನ ಮೂರ್ತಿಯನ್ನು ಮನೆಗೆ ತಂದಿದ್ದಾರೆ. ಇದನ್ನು ಕಂಡ ತಂದೆ-ತಾಯಿ ಒಂದು ಕ್ಷಣ ಮೌನವಾಗಿದ್ದರು. ಬಳಿಕ ತಂದೆ-ತಾಯಿ ಮಗನ ಬಗ್ಗೆ ಒಂದಷ್ಟೂ ಬೇಸರ ಮಾಡಿಕೊಳ್ಳದೇ ಗಣೇಶನ ಮೂರ್ತಿಯಿಂದ ಶ್ರದ್ಧಾ ಭಕ್ತಿಯಿಂದ ಬರ ಮಾಡಿಕೊಂಡು ಮನೆಯಲ್ಲಿ ಪ್ರತಿಷ್ಠಾಪಿಸಿ ಹಿಂದೂ ಸಂಪ್ರದಾಯದಂತೆ ಪೂಜಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ