ನ್ಯೂಸ್ ನಾಟೌಟ್: ಸುಳ್ಯದ ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸೆ.13ರಂದು ಓಣಂ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು. ಮಹಾಬಲಿ ಚಕ್ರವರ್ತಿಯನ್ನು ಚೆಂಡೆ -ಮೇಳದೊಂದಿಗೆ ಸ್ವಾಗತಿಸಲಾಯಿತು. ಕಾರ್ಯಕ್ರಮಕ್ಕೆ ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ವಿದ್ಯುಕ್ತ ಚಾಲನೆ ನೀಡಿ, ಓಣಂ ಹಬ್ಬದ ಆಚರಣೆಯ ಹಿಂದಿರುವ ಕಥೆಯನ್ನು ವಿವರಿಸಿ ಸಂತೋಷ ಮತ್ತು ಸಮೃದ್ಧಿಯಿಂದ ತುಂಬಿದ ಓಣಂ ಆಗಿರಲಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್(ರಿ.) ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ ಸಿ, ಕಾಲೇಜಿನ ಗೌರವ ಉಪನ್ಯಾಸಕರಾದ ಶೀಲಾ ಜಿ ನಾಯಕ್, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಡೀನ್ ಡಾ. ನೀಲಾಂಬಿಕೈ ನಟರಾಜನ್, ಕೆವಿಜಿ ಇನ್ಸ್ಟಿಟ್ಯೂಟ್ ಆಫ್ ನರ್ಸಿಂಗ್ ಸೈನ್ಸಸ್ ಪ್ರಾಂಶುಪಾಲೆ ಬಿ ಎಂ. ಪ್ರೇಮ, ಕಾರ್ಯಕ್ರಮದ ಸಂಯೋಜಕರು ಹಾಗೂ ಸರ್ಜರಿ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ರಂಜಿತ್ ಕೆಬಿ ಹಾಗೂ ಹಲವಾರು ಗಣ್ಯರು ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಂಗವಾಗಿ ಪೂಕಳಂ ಸ್ಪರ್ಧೆ ಏರ್ಪಡಿಸಲಾಯಿತು. ಕಾಲೇಜಿನ ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಕೇರಳದ ಸಾಂಪ್ರದಾಯಿಕ ಶೈಲಿಯ ಉಡುಪು ಧರಿಸಿ ಸಂಭ್ರಮಿಸಿದರು. ಅನಂತರ ಓಣಂನ ರುಚಿಕರವಾದ ಸಾಂಪ್ರದಾಯಿಕ ಔತಣವಾದ ಓಣಂಸಧ್ಯ ವಿತರಿಸಲಾಯಿತು. ತದನಂತರ ಸಾಂಸ್ಕೃತಿಕ ವೈವಿದ್ಯ ಹಾಗೂ ವಿವಿಧ ಸ್ಪರ್ಧೆಗಳನ್ನು ಎರ್ಪಡಿಸಲಾಯಿತು.. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರು ಹಾಗೂ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.