ಬಿಳಿ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯ ಮಧ್ಯೆ ಮಲಗಿದ್ದ ವ್ಯಕ್ತಿ..! ಆತನನ್ನು ಬಂಧಿಸಿದ ಪೊಲೀಸರು..! ಇಲ್ಲಿದೆ ವೈರಲ್ ವಿಡಿಯೋ

ನ್ಯೂಸ್ ನಾಟೌಟ್: ಒಂದು ರೀಲ್ಸ್​ ವಿಡಿಯೋಗಾಗಿ ವ್ಯಕ್ತಿಯೊಬ್ಬ ಬಿಳಿಯ ಬಟ್ಟೆ ಹೊದ್ದು, ಮೂಗಿನೊಳಗೆ ಹತ್ತಿ ಇಟ್ಟು ಶವದಂತೆ ರಸ್ತೆಯ ಮಧ್ಯದಲ್ಲಿ ಮಲಗಿರುವ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗುತ್ತಿದೆ. ಆತ ರೀಲ್ಸ್​ಗಾಗಿ ರಸ್ತೆಯ ನಡುವೆ ಬ್ಯಾರಿಕೇಡ್​ ಹಾಕಿ, ಹೆಣದಂತೆ ಮಲಗಿದ್ದಾನೆ. ಮುಕೇಶ್​ ಕೆಲ ಹೊತ್ತು ಹೆಣದಂತೆ ಮಲಗಿದ್ದು ಬಳಿಕ ಜೋರಾಗಿ ನಗಲು ಆರಂಭಿಸಿದ್ದ, ಈ ವಿಷಯ ಉನ್ನತ ಪೊಲೀಸ್ ಅಧಿಕಾರಿಗಳಿಗೆ ಗೊತ್ತಾಗಿರಲಿಲ್ಲ ಎನ್ನಲಾಗಿದೆ. ಯುಪಿ ಪೊಲೀಸರ ಗಮನಕ್ಕೆ ಬಂದ ತಕ್ಷಣ, ಈ ವಿಷಯದ ಬಗ್ಗೆ ತಕ್ಷಣ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಪೊಲೀಸರು ಮುಖೇಶ್‌ನನ್ನು ಬಂಧಿಸಿ, ಬಿಎನ್‌ಎಸ್‌ನ ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಕ್ರಮ ಕೈಗೊಂಡಿದ್ದಾರೆ. Click