ನ್ಯೂಸ್ ನಾಟೌಟ್: ದಕ್ಷಿಣ ಕನ್ನಡ ಜಿಲ್ಲೆಯ ಹಲವು ಭಾಗಗಳಲ್ಲಿ ರಬ್ಬರ್ ಕೃಷಿಯನ್ನೇ ನಂಬಿದ್ದಾರೆ. ಅದರಲ್ಲೂ ಅಡಿಕೆಗೆ ಹಳದಿ ರೋಗ ಬಂದಲ್ಲೆಲ್ಲ ರಬ್ಬರ್ ನದ್ದೇ ಹವಾ.. ಆದರೆ ಕಳೆದ ಕೆಲವು ವರ್ಷಗಳಿಂದ ರಬ್ಬರ್ ಗೆ ಹೇಳುವಂತಹ ರೇಟ್ ಇರಲಿಲ್ಲ. ಇದೀಗ ರಬ್ಬರ್ ಕೃಷಿಕನಿಗೆ ಖುಷಿಯ ವಿಚಾರ ಹೊರಬಿದ್ದಿದೆ. ಕಳೆದ 12 ವರ್ಷಗಳಲ್ಲೇ ದಾಖಲೆಯ ಗರಿಷ್ಠ ಮಟ್ಟಕ್ಕೆ ದರ ತಲುಪಿದೆ.
ರಬ್ಬರ್ ಬೋರ್ಡ್ ಕೆಜಿಗೆ 235 ರೂ. ಬೆಲೆ ನಿಗದಿಪಡಿಸಲಾಗಿದೆ. ಇದರ ಹೊರತಾಗಿಯೂ ಕಾಸರಗೋಡು ಸೇರಿದಂತೆ ಕೇರಳದ ಬಹುತೇಕ ಪ್ರದೇಶಗಳಲ್ಲಿ 237 ರಿಂದ 241 ರೂ.ಗಳಿಗೆ ಮಾರಾಟವಾಗುತ್ತಿದೆ. ಕೆಲವು ವ್ಯಾಪಾರಿಗಳು 241 ರೂ.ಗೆ ಮಾರಾಟ ಮಾಡಿದ್ದಾರೆ. 2011-12ರಲ್ಲಿ ರಬ್ಬರ್ ಶೀಟ್ಗಳ ಬೆಲೆ ಕಿಲೋಗೆ 283 ರೂ. ತಲುಪಿತ್ತು ಅನ್ನುವುದನ್ನು ಸ್ಮರಿಸಬಹುದು. ಹಲವು ಕಡೆ ಪ್ರಾಕೃತಿಕ ವಿಕೋಪದಿಂದಾಗಿ ರಬ್ಬರ್ ಕೊರತೆ ಉಂಟಾಗಿದೆ. ಹೀಗಾಗಿ ಕೆಲವು ದಿನಗಳಿಂದ ಕೆಜಿಗೆ 2 ರಿಂದ 3 ರೂ. ಬೆಲೆ ಏರಿಕೆಯಾಗಿದೆ. ಸದ್ಯದ ಪರಿಸ್ಥಿತಿ ಮುಂದುವರಿದರೆ ಒಂದು ವಾರದಲ್ಲಿ ಕಿಲೋಗೆ 250 ರೂ. ತಲುಪಬಹುದು ಎಂದು ಮೂಲಗಳು ಅಂದಾಜಿಸಲಾಗಿದೆ.