- +91 73497 60202
- [email protected]
- November 22, 2024 12:46 PM
ನ್ಯೂಸ್ ನಾಟೌಟ್: ಅರವಿಂದ ಬೆಲ್ಲದ್ ಅವರು ಪತ್ರದ ಮೂಲಕ ಕ್ಷಮೆ ಕೋರಿದ್ದು, ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ,” ರಾಜಕೀಯದಲ್ಲಿ ಟೀಕೆ, ಟಿಪ್ಪಣಿಗಳು ಸಹಜ. ಕೆಲವೊಮ್ಮೆ ಉದ್ವೇಗದಲ್ಲಿ ಮತ್ತೊಬ್ಬರ ಘನತೆಗೆ ಚ್ಯುತಿ ತರುವಂತಹ ಹೇಳಿಕೆ ಅರಿವಿಗೆ ಬಾರದೆಯೇ ಬಂದು ಬಿಡುತ್ತದೆ. ಜಿಂದಾಲ್ ಕಂಪನಿಗೆ ಭೂಮಿ ನೀಡಿರುವ ನಮ್ಮ ಸರಕಾರದ ತೀರ್ಮಾನವನ್ನು ವಿರೋಧಿಸಿ ಮಾತನಾಡುವಾಗ ವಿರೋಧ ಪಕ್ಷದ ಉಪನಾಯಕರಾದ ಅರವಿಂದ ಬೆಲ್ಲದ್ ಅವರು ವೈಯಕ್ತಿಕವಾಗಿ ನನ್ನನ್ನು ನಿಂದನೆ ಮಾಡಿದ್ದರು. ತಮ್ಮ ತಪ್ಪಿನ ಅರಿವಾಗಿ ಪತ್ರದ ಮೂಲಕ ಕ್ಷಮೆ ಕೋರಿದ್ದಾರೆ. ಅವರ ಈ ನಡೆಯನ್ನು ನಾನು ಅತ್ಯಂತ ಮುಕ್ತವಾಗಿ ಸ್ವಾಗತಿಸುತ್ತೇನೆ, ಜೊತೆಗೆ ಅವರ ಬಗ್ಗೆ ನನ್ನ ಮನಸ್ಸಿನಲ್ಲಿ ದ್ವೇಷವಾಗಲೀ, ಬೇಸರವಾಗಲೀ ಯಾವುದು ಇಲ್ಲ” ಎಂದು ಸಿದ್ದರಾಮಯ್ಯ ಅರವಿಂದ್ ಬೆಲ್ಲದ್ ಬರೆದ ಪತ್ರಕ್ಕೆ ಪ್ರತಿಕ್ರಿಯಿಸಿದ್ದಾರೆ. ʼನಾನು ಒಂದೆರಡು ಬಾರಿ ಬಾಯ್ತಪ್ಪಿನಿಂದ ಏಕವಚನ ಬಳಕೆ ಮಾಡಿ ನಂತರ ವಿಷಾದ ವ್ಯಕ್ತಪಡಿಸಿದ್ದೇನೆ, ಆ ತಪ್ಪು ಮರುಕಳಿಸದಂತೆ ತಿದ್ದಿಕೊಳ್ಳುವ ಪ್ರಯತ್ನವನ್ನು ಮಾಡಿದ್ದೇನೆ. ನನ್ನ ಸುದೀರ್ಘ 40 ವರ್ಷಗಳ ರಾಜಕೀಯ ಜೀವನದಲ್ಲಿ ವಿಪಕ್ಷಗಳ ಹಲವು ಕಿರಿಯ, ಹಿರಿಯ ನಾಯಕರಿಂದ ವೈಯಕ್ತಿಕ ನಿಂದನೆ ಮಾಡುವಂತಹ ಪದಬಳಕೆ ಎಲ್ಲವನ್ನೂ ಕೇಳಿದ್ದೇನೆ, ಎದುರಿಸಿದ್ದೇನೆʼ ಎಂದು ಹೇಳಿದ್ದಾರೆ. ‘ಮೊದಲ ಬಾರಿಗೆ ಅರವಿಂದ ಬೆಲ್ಲದ್ ಅವರು ತಾವು ಬಳಸಿದ ಪದದ ಬಗ್ಗೆ ಸ್ವತಃ ಅವರೇ ಬೇಸರ ವ್ಯಕ್ತಪಡಿಸಿ, ಪತ್ರದ ಮೂಲಕ ಕ್ಷಮೆ ಕೇಳಿ ಹೊಸ ತಲೆಮಾರಿನ ರಾಜಕಾರಣಿಗಳಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿದ್ದಾರೆ. ಅರವಿಂದ್ ಅವರ ತಂದೆ ಚಂದ್ರಕಾಂತ ಬೆಲ್ಲದ್ ಅವರು ನನ್ನ ದೀರ್ಘಕಾಲದ ಸ್ನೇಹಿತರು. ಅವರೊಬ್ಬ ಸಜ್ಜನ ರಾಜಕಾರಣಿ. ಅವರ ಸಜ್ಜನಿಕೆಯ ಪರಂಪರೆಯನ್ನು ಅರವಿಂದ್ ಮುಂದುವರಿಸಿಕೊಂಡು ಹೋಗಲಿ’ ಎಂದು ಹಾರೈಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ