ನ್ಯೂಸ್ ನಾಟೌಟ್: ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ದೌರ್ಜನ್ಯವೆಸಗಿದ್ದ ಚಿಕ್ಕೋಡಿಯ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಬಂಧಿಸಿದ್ದಾರೆ. ಶಿಕ್ಷಕ ಮೊಹಮ್ಮದ್ ಸಾದಿಕ್ ಮಿಯಾ ಬೇಗ್ ಬಂಧಿತ ಆರೋಪಿ ಎಂದು ವರದಿ ತಿಳಿಸಿದೆ.
ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಗಳನ್ನು ಮುಟ್ಟಿ ವಿಕೃತಿ ಮೆರದಿದ್ದಾನೆ. ಅಲ್ಲದೇ, ಶೌಚಕ್ಕೆ ಹೋಗುತ್ತಿದ್ದಾಗ ಖಾಸಗಿ ಅಂಗಾಂಗದ ಫೋಟೋ ತೆಗೆದುಕೊಂಡು ಬರುವಂತೆ ವಿದ್ಯಾರ್ಥಿನಿಯರಿಗೆ ಶಿಕ್ಷಕ ಮೊಹಮ್ಮದ್ ಸಾದಿಕ್ ಬೆದರಿಸುತ್ತಿದ್ದನು. ಈ ಫೋಟೋಗಳನ್ನು ತನ್ನ ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದನು ಎನ್ನಲಾಗಿದೆ.
ಶಿಕ್ಷಕ ಮೊಹಮ್ಮದ್ ಸಾದಿಕ್ ಕಳೆದ ಒಂದು ವರ್ಷದಿಂದ ಸುಮಾರು 30ಕ್ಕೂ ಹೆಚ್ಚು ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯವೆಸಗಿದ್ದಾನೆ. ಓರ್ವ ವಿದ್ಯಾರ್ಥಿನಿ ತಾಯಿಯ ಮುಂದೆ ದೌರ್ಜನ್ಯದ ಬಗ್ಗೆ ಹೇಳಿದಾಗ, ಪ್ರಕರಣ ಬೆಳಕಿಗೆ ಬಂದಿದೆ. ಆರೋಪಿ ಮೊಹಮ್ಮದ್ ಸಾದಿಕ್ ವಿರುದ್ಧ ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.
ಬಂಧಿತ ಶಿಕ್ಷಕ ಮೊಹಮ್ಮದ್ ಸಾದಿಕ್ ಮೊಬೈಲ್ನಲ್ಲಿ 300ಕ್ಕೂ ಹೆಚ್ಚು ಅಶ್ಲೀಲ ವಿಡಿಯೋಗಳು ಪತ್ತೆಯಾಗಿವೆ. ಹಾಗೇ ವಿದ್ಯಾರ್ಥಿನಿಯರ ಖಾಸಗಿ ಅಂಗಾಂಗಳ ಫೋಟೋಗಳು ಕೂಡ ಪತ್ತೆಯಾಗಿವೆ.
ಶಿಕ್ಷಕ ಮೊಹಮ್ಮದ್ ಸಾದಿಕ್ ವಿದ್ಯಾರ್ಥಿನಿಯರ ಅಂಗಾಂಗಗಳನ್ನ ಮುಟ್ಟುತ್ತಿದ್ದನು. ವಿದ್ಯಾರ್ಥಿನಿಯರು ಶೌಚಕ್ಕೆ ಹೋದಾಗ ಖಾಸಗಿ ಅಂಗಾಂಗಳ ಫೋಟೊ ತೆಗೆದುಕೊಂಡು ಬಾ ಅಂತ ಹೇಳುತ್ತಿದ್ದನು ಎಂದು ವಿದ್ಯಾರ್ಥಿನಿಯರ ಹೇಳಿಕೆಯಿಂದ ಮೇಲ್ನೋಟಕ್ಕೆ ದೃಢಪಟ್ಟಿದೆ ಎಂದು ಬೆಳಗಾವಿ ಎಸ್ಪಿ ಡಾ.ಭೀಮಾಶಂಕರ್ ಗುಳೇದ್ ತಿಳಿಸಿದ್ದಾರೆ.
ಆರೋಪಿಯ ಮೊಬೈಲ್ ಕೂಡ ಸೀಜ್ ಮಾಡಿದ್ದೇವೆ. ಮೊಬೈಲ್ನಲ್ಲಿನ ಕೆಲ ಫೋಟೊಗಳು ಡಿಲೀಟ್ ಆಗಿದ್ದು ಎಫ್ಎಸ್ಎಲ್ಗೆ ಕಳುಹಿಸುತ್ತೇವೆ. ಸುಮಾರು ವಿದ್ಯಾರ್ಥಿನಿಯರು ಆತನ ವಿರುದ್ಧ ಹೇಳಿಕೆ ಕೊಟ್ಟಿದ್ದಾರೆ. ಪೋಕ್ಸೊ ಕಾಯ್ದೆಯಡಿ ತನಿಖೆ ಮಾಡುತ್ತಿದ್ದೇವೆ ಎಂದು ಪೊಲೀಸರು ತಿಳಿಸಿದ್ದಾರೆ.
Click