ನ್ಯೂಸ್ ನಾಟೌಟ್: ಟೆಂಪೊ ದೇಗುಲಕ್ಕೆ ಡಿಕ್ಕಿ ಹೊಡೆದಿದ್ದು, ಘಟನೆಯಲ್ಲಿ ದೇಗುಲದೊಳಗಿದ್ದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದು, ದೇಗುಲದಲ್ಲಿದ್ದ ಮೂವರು ಮಹಿಳೆಯರಿಗೆ ಗಂಭೀರ ಗಾಯವಾಗಿರುವ ಘಟನೆ ಮಾಲೂರು (Malur) ತಾಲೂಕಿನ ಮಾಸ್ತಿ ಬಳಿಯ ಹಸಾಂಡಹಳ್ಳಿ ಗ್ರಾಮದಲ್ಲಿ ನಡೆದಿದೆ.
ಮಾಸ್ತಿ ಗ್ರಾಮದ ಚಂದ್ರಶೇಖರ್ (38) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ.
ಕೋಲಾರದ ಮಾಲೂರು ತಾಲೂಕಿನ ಮಾಸ್ತಿ ಬಳಿಯ ಹಸಾಂಡಹಳ್ಳಿ ಗ್ರಾಮದಲ್ಲಿರುವ ಮುನೇಶ್ವರಸ್ವಾಮಿ ದೇಗುಲದಲ್ಲಿ ಈ ಘಟನೆ ನಡೆದಿದೆ. ಮಹೇಂದ್ರ ಟೆಂಪೊ ಒಂದು ದೇಗುಲಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ. ಮಾಸ್ತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Click