ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವು..! ಗುರು ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ..!

ನ್ಯೂಸ್‌ ನಾಟೌಟ್:‌ ಜಾತ್ರಾ ರಥೋತ್ಸವದ ವೇಳೆ ರಥದ ಚಕ್ರಕ್ಕೆ ಸಿಲುಕಿ ಯುವಕ ಸಾವನ್ನಪ್ಪಿದ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ತಾಲೂಕಿನ ಬಿಬಿ ಇಂಗಳಗಿ ಗ್ರಾಮದಲ್ಲಿ ನಡೆದಿದೆ. ದೇವೇಂದ್ರ ಬಡಿಗೇರ್ (24) ಮೃತ ವ್ಯಕ್ತಿ ಎಂದು ಗುರುತಿಸಲಾಗಿದೆ. ಘನಗುರು ಸಿದ್ದೇಶ್ವರ ದೇವರ ಜಾತ್ರೆಯಲ್ಲಿ ಅವಘಡ ಸಂಭವಿಸಿದ್ದು, ದುರಂತದ ದೃಶ್ಯ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಯಾಗಿದೆ.ರಥವನ್ನು ಎಳೆಯುವ ವೇಳೆ ಯುವಕ ಆಯತಪ್ಪಿ ಚಕ್ರದ ಅಡಿಗೆ ಸಿಲುಕಿದ್ದಾನೆ. ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ದೇವೇಂದ್ರ ಕೊನೆಯುಸಿರೆಳೆದಿದ್ದಾನೆ. ಈ ಕುರಿತು ಕಲಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. Click