- +91 73497 60202
- [email protected]
- November 23, 2024 10:39 PM
ನ್ಯೂಸ್ ನಾಟೌಟ್: ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಆರೋಪ ಕೇಳಿಬಂದಿದ್ದು, ಈ ಪೋಕ್ಸೋ ಪ್ರಕರಣ ವಿಚಾರಣೆ ಹೈಕೋರ್ಟ್ನಲ್ಲಿದೆ. ಇದರ ಮಧ್ಯ ಸಂತ್ರಸ್ತೆ ತಾಯಿ ಸಾವಿನ ಬಗ್ಗೆ ಅನುಮಾನಮಾನಗಳು ವ್ಯಕ್ತವಾಗಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸುವಂತೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಗೃಹ ಇಲಾಖೆಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ತನ್ನ ಅಪ್ರಾಪ್ತ ವಯಸ್ಸಿನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ವಿರುದ್ಧ ಆರೋಪ ಮಾಡಿದ್ದ ಮಹಿಳೆಯ ಸಾವಿನ ಪ್ರಕರಣದ ಕುರಿತು ಪೊಲೀಸ್ ತನಿಖೆಗೆ ಕರ್ನಾಟಕ ರಾಜ್ಯ ಮಹಿಳಾ ಆಯೋಗ ಒತ್ತಾಯಿಸಿದೆ. ಅಲ್ಲದೆ, ಮಹಿಳೆಯ ಅನುಮಾನಾಸ್ಪದ ಸಾವು ಹಾಗೂ ಅಂತ್ಯಸಂಸ್ಕಾರದ ಕುರಿತು ವರದಿ ಸಲ್ಲಿಸುವಂತೆ ಬೆಂಗಳೂರು ಪೊಲೀಸರಿಗೆ ಮಹಿಳಾ ಆಯೋಗ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಆಯೋಗ ಪತ್ರದ ಮೂಲಕ ಸೂಚನೆ ನೀಡಿದ್ದಾರೆ. ಸಂತ್ರಸ್ತೆಯ ತಾಯಿಯ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಮಹಿಳೆ ಸಾವಿನ ಬಗ್ಗೆ ಕುಟುಂಬದವರು ಅನುಮಾನ ವ್ಯಕ್ತಪಡಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ಮಹಿಳೆಯ ಪುತ್ರಿ ಭೇಟಿಯಾಗಿದ್ದರು. ಕ್ಯಾನ್ಸರ್ನಿಂದ ದಿಢೀರ್ ಸಾವು ಹೇಗೆ ಉಂಟಾಗುತ್ತೆ ಎಂಬುವುದೇ ಪ್ರಶ್ನೆ? ಮಹಿಳೆ ಶವ ಹಸ್ತಾಂತರ ವೇಳೆಯೂ ಹಲವು ಲೋಪಗಳು ಉಂಟಾಗಿವೆ. ಇದೆಲ್ಲಾ ವಿಚಾರಗಳು ಸಾಕಷ್ಟು ಅನುಮಾನಕ್ಕೆ ಕಾರಣವಾಗಿವೆ. ಮಹಿಳೆ ಸಾವಿನ ಬಗ್ಗೆ ಸಂತ್ರಸ್ತೆ ಕುಟುಂಬದವರು ಹುಳಿಮಾವು ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ ಎಂದು ತಿಳಿಸಿದ್ದಾರೆ.ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ ಎಸಗಿದ ಆರೋಪದಡಿ, ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಯಡಿಯೂರಪ್ಪ ವಿರುದ್ಧ ಎಫ್ಐಆರ್ ದಾಖಲಾಗಿತ್ತು. ಈಗ ಮತ್ತೆ ಈ ಬಗ್ಗೆ ತನಿಖೆ ನಡೆಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ