- +91 73497 60202
- [email protected]
- November 22, 2024 6:49 AM
ನ್ಯೂಸ್ ನಾಟೌಟ್: ಗುಜರಾತ್ ನ ಗಾಂಧಿನಗರದಲ್ಲಿ ನಕಲಿ ಕೋರ್ಟ್ ಸ್ಥಾಪಿಸಿ, ನ್ಯಾಯಾಧೀಶನಂತೆ ನಟಿಸಿ ಹಲವು ನಕಲಿ ಆದೇಶಗಳನ್ನು ಹೊರಡಿಸಿದ್ದ ನಕಲಿ ನ್ಯಾಯಾಧೀಶನನ್ನು ಪೊಲೀಸರು ಇಂದು(ಅ.22) ಬಂಧಿಸಿದ್ದಾರೆ. ಮೋರಿಸ್ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ಎಂಬಾತ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ. ಈತ ನಕಲಿ ನ್ಯಾಯಾಲಯ ಸೃಷ್ಟಿಸಿ, 2019ರಲ್ಲಿ ಸರ್ಕಾರಿ ಭೂಮಿಗೆ ಸಂಬಂಧಿಸಿದ ಪ್ರಕರಣದಲ್ಲಿ ತನ್ನ ಕಕ್ಷಿದಾರನ ಪರವಾಗಿ ಆದೇಶವನ್ನು ನೀಡಿದ್ದಾನೆ. ಈ ನಕಲಿ ನ್ಯಾಯಾಲಯ ಕಳೆದ ಐದು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆರ್ಬಿಟ್ರಲ್ ಟ್ರಿಬ್ಯೂನಲ್ ನ್ಯಾಯಾಲಯದ ನ್ಯಾಯಾಧೀಶನಂತೆ ನಟಿಸುವ ಮೂಲಕ ಜನರನ್ನು ವಂಚಿಸಿದ ಆರೋಪದ ಮೇಲೆ ಅಹ್ಮದಾಬಾದ್ ನಗರ ಪೊಲೀಸರು ಸ್ಯಾಮ್ಯುಯೆಲ್ ನನ್ನು ಬಂಧಿಸಿದ್ದಾರೆ.ಜಂಟಿ ಸಿವಿಲ್ ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ದೂರಿನಂತೆ ಕಾರಂಜ್ ಪೊಲೀಸ್ ಠಾಣೆಯಲ್ಲಿ ಸ್ಯಾಮ್ಯುಯೆಲ್ ಕ್ರಿಶ್ಚಿಯನ್ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 170 ಮತ್ತು 419ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಟಿ ಸಿವಿಲ್ ಕೋರ್ಟ್ ನಲ್ಲಿ ಭೂ ವಿವಾದಕ್ಕೆ ಸಂಬಂಧಿಸಿ ಬಾಕಿ ಇರುವ ಪ್ರಕರಣದಲ್ಲಿ ಕ್ರಿಶ್ಚಿಯನ್ ಜನರನ್ನು ಬಲೆಗೆ ಬೀಳಿಸುತ್ತಿದ್ದ. ಪ್ರಕರಣವನ್ನು ನಿಭಾಯಿಸಲು ನಿರ್ದಿಷ್ಟ ಮೊತ್ತವನ್ನು ಪಡೆಯುತ್ತಿದ್ದ. ಸ್ಯಾಮ್ಯುಯೆಲ್ ಮೊದಲು ನ್ಯಾಯಾಲಯದಿಂದ ನೇಮಕಗೊಂಡ ಅಧಿಕೃತ ಮಧ್ಯಸ್ಥಗಾರನಾಗಿ ತನ್ನನ್ನು ತಾನು ಪರಿಚಯಿಸಿಕೊಳ್ಳುತ್ತಿದ್ದ ಎನ್ನಲಾಗಿದೆ. ನ್ಯಾಯಾಲಯದಂತೆ ವಿನ್ಯಾಸಗೊಳಿಸಲಾದ ಗಾಂಧಿನಗರ ಮೂಲದ ತನ್ನ ಕಚೇರಿಗೆ ತನ್ನ ಕಕ್ಷಿದಾರರನ್ನು ಕರೆಸಿ ತನ್ನ ಕಕ್ಷಿದಾರರಿಗೆ ಅನುಕೂಲವಾಗುವ ರೀತಿ ಆದೇಶವನ್ನು ನೀಡುತ್ತಿದ್ದ, ಆತನ ಸಹಚರರು ನ್ಯಾಯಾಲಯದ ಸಿಬ್ಬಂದಿ ಅಥವಾ ವಕೀಲರಂತೆ ಕಲಾಪದಲ್ಲಿ ಭಾಗವಹಿಸುತ್ತಿದ್ದರು ಎನ್ನಲಾಗಿದೆ.ಪ್ರಕರಣವೊಂದರಲ್ಲಿ ತನ್ನ ಆದೇಶವನ್ನು ಜಾರಿಗೆ ತರಲು ಸ್ಯಾಮ್ಯುಯೆಲ್ ಮತ್ತೋರ್ವ ವಕೀಲನ ಮೂಲಕ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಿದ್ದಾನೆ ಮತ್ತು ಆದೇಶದ ಪ್ರತಿಯನ್ನು ಈ ವೇಳೆ ಲಗತ್ತಿಸಿದ್ದಾನೆ. ಆದರೆ, ನ್ಯಾಯಾಲಯದ ರಿಜಿಸ್ಟ್ರಾರ್ ಹಾರ್ದಿಕ್ ದೇಸಾಯಿ ಇದು ನಕಲಿ ಆದೇಶ ಪ್ರತಿ ಎಂದು ಪತ್ತೆ ಹಚ್ಚಿ ಕಾರಂಜ್ ಪೊಲೀಸರಿಗೆ ದೂರು ನೀಡಿದ್ದಾರೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ