ನ್ಯೂಸ್ ನಾಟೌಟ್ : ಸುಳ್ಯದ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ, ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಗುರುವಾರ (ಅ. 24) ಕಾಲೇಜಿನ ಆಡಿಟೋರಿಯಂನಲ್ಲಿ – “ಮಾನವನ ಸ್ವಾಸ್ಥ್ಯ ರಕ್ಷಣೆ ಹಾಗೂ ಯೋಗಕ್ಷೇಮದಲ್ಲಿ ಆಯುರ್ವೇದ ಪಾತ್ರ” ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಾಗಾರ ಆಯೋಜಿಸಲಾಯಿತು.
ಕಾರ್ಯಕ್ರಮವನ್ನು ಕಾಲೇಜಿನ ಪ್ರಸೂತಿ ತಂತ್ರ ಮತ್ತು ಸ್ತ್ರೀ ರೋಗ ವಿಭಾಗದ ಮುಖ್ಯಸ್ಥ ಡಾ. ಅಶೋಕ್ ಕೆ. ಉದ್ಘಾಟಿಸಿದರು. ಮಾಹಿತಿ ಕಾರ್ಯಾಗಾರವನ್ನು ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ಅಸೋಸಿಯೆಟ್ ಪ್ರೊಫೆಸರ್ ಡಾ. ದೀಪ್ತಿ ಎಸ್ ನಡೆಸಿಕೊಟ್ಟರು. ಸುಳ್ಯ ಲಯನ್ಸ್ ಕ್ಲಬ್ ಅಧ್ಯಕ್ಷ ರಾಮಕೃಷ್ಣ ರೈ,
ಜೆಸಿಐ ಸುಳ್ಯ ಪಯಸ್ವಿನಿಯ ಅಧ್ಯಕ್ಷ ಜೇಸಿ ಗುರುಪ್ರಸಾದ್ ನಾಯಕ್, ಜೆಸಿಐ ಸುಳ್ಯ ಪಯಸ್ವಿನಿಯ ಮಹಿಳಾ ಅಧ್ಯಕ್ಷೆ ಜೇಸಿ ಲತಾಶ್ರೀ ಸುಪ್ರೀತ್ ಮೊಂಟಡ್ಕ, ಅಜ್ಜಾವರದ ಚೈತ್ರ ಯುವತಿ ಮಂಡಳಿ ಅಧ್ಯಕ್ಷೆ ಶಶ್ಮಿ ಭಟ್, ಅಜ್ಜಾವರ ಪ್ರತಾಪ ಯುವಕ ಮಂಡಲ ಅಧ್ಯಕ್ಷ ಗುರುರಾಜ ಅಜ್ಜಾವರ ಉಪಸ್ಥಿತರಿದ್ದರು.
ಲಯನ್ಸ್ ಕ್ಲಬ್ ಸುಳ್ಯ, ಜೆಸಿಐ ಸುಳ್ಯ ಪಯಸ್ವಿನಿ, ಪ್ರತಾಪ ಯುವಕ ಮಂಡಲ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ, ತೋಟಗಾರಿಕಾ ಇಲಾಖೆ ಸುಳ್ಯ, ಹಾಗೂ ಕಾಲೇಜಿನ ಎನ್ ಎಸ್ ಎಸ್ ಘಟಕದ ಸಹಯೋಗದಿಂದ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಕಾಲೇಜಿನ ಎನ್ ಎಸ್ ಎಸ್ ಘಟದ ಯೋಜನಾಧಿಕಾರಿ ಡಾ. ಪ್ರಮೋದ ಪಿ ಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಅಜ್ಜಾವರದ ಚೈತ್ರ ಯುವತಿ ಮಂಡಲದ ಅಧ್ಯಕ್ಷೆ ಶಶ್ಮಿ ಭಟ್ ಅಜ್ಜಾವರ ಅವರು ಆಯುರ್ವೇದದ ಉಪಯೋಗದಿಂದ ತಮ್ಮ ಜೀವನದಲ್ಲಿ ಲಭಿಸಿದ ಪ್ರಯೋಜನಗಳ ಕುರಿತು ಮಾತನಾಡಿದರು. ವಿದ್ಯಾರ್ಥಿನಿಯರಾದ ಚಿತ್ಕಲ ಹಾಗೂ ಅಶ್ವಿನಿ ಪ್ರಾರ್ಥಿಸಿದರು. ಯಶಸ್ವಿನಿ ಹಾಗೂ ಲಕ್ಷ್ಮಿ ಕಾರ್ಯಕ್ರಮ ನಿರೂಪಿಸಿದರು.