ಕೃಷಿಹೊಂಡಕ್ಕೆ ಬಿದ್ದು 2 ಪುಟ್ಟ ಬಾಲಕಿಯರು ಸಾವು..! ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ದುರ್ಘಟನೆ.!

ನ್ಯೂಸ್ ನಾಟೌಟ್: ಕೃಷಿ ಹೊಂಡಕ್ಕೆ ಬಿದ್ದು ಇಬ್ಬರು ಬಾಲಕಿಯರು ಸಾವನ್ನಪ್ಪಿದ ಮನಕಲಕುವ ಘಟನೆ ದಾವಣಗೆರೆಯ ಜಗಳೂರಿನ ಅಸಗೋಡು ಗ್ರಾಮದಲ್ಲಿ ನಡೆದಿದೆ. ಮೃತ ಬಾಲಕಿಯರನ್ನು ಗಂಗಮ್ಮ (12) ಹಾಗೂ ಕಾವ್ಯ (8) ಎಂದು ಗುರುತಿಸಲಾಗಿದೆ. ಜಮೀನಿನಲ್ಲಿ ಆಟವಾಡುತ್ತಿದ್ದ ವೇಳೆ ಕಾಲು ಜಾರಿ ಮಕ್ಕಳು ಕೃಷಿ ಹೊಂಡಕ್ಕೆ ಬಿದ್ದಿದ್ದಾರೆ. ಈ ವೇಳೆ ಅಲ್ಲಿದ್ದ ಪೋಷಕರು ಮಕ್ಕಳ ರಕ್ಷಣೆಗೆ ಧಾವಿಸಿದ್ದಾರೆ. ಅಷ್ಟರಲ್ಲಾಗಲೇ ಬಾಲಕಿಯರು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಕ್ಕಳ ಸಾವಿನಿಂದ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.