ನ್ಯೂಸ್ ನಾಟೌಟ್ : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ (ವೃತ್ತಿಪರ ಪದವಿ ಮತ್ತು ಸ್ನಾತಕೋತ್ತರ ಪದವಿ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ವಿದ್ಯಾರ್ಥಿಗಳಿಂದ 2024-25ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಪ್ರವರ್ಗ-1, 2ಎ, 2ಬಿ, 3ಎ, 3ಬಿ ಮತ್ತು ಪ.ಜಾ/ಪ.ವರ್ಗ ಮತ್ತಿತರ ಸಮುದಾಯಕ್ಕೆ ಸೇರಿದ ಅಭ್ಯರ್ಥಿಗಳು ಹಾಸ್ಟೆಲ್ ಪ್ರವೇಶಾತಿಗೆ ಅರ್ಜಿ ಹಾಕಬಹುದು.
ಪ್ರವರ್ಗ 1, SC/ST – 2.50 ಲಕ್ಷ, 2ಎ, 2ಬಿ, 3ಎ, 3ಬಿ ಮತ್ತಿತರ ಹಿಂದುಳಿದ ವರ್ಗದವರು ಅರ್ಜಿ ಸಲ್ಲಿಸಲು ಅರ್ಹರು ಎನ್ನಲಾಗಿದೆ.ಇವರ ಆದಾಯ 1 ಲಕ್ಷ ಆದಾಯವನ್ನು ಮೀರಿರಬಾರದು ಎಂಬ ಷತ್ತು ವಿಧಿಸಲಾಗಿದೆ.
ಅರ್ಜಿ ಸಲ್ಲಿಸಲು SSP ID, ಜಾತಿ RD ಸಂಖ್ಯೆ, ಆದಾಯ RD ಸಂಖ್ಯೆ, ಅಂಕ ಪಟ್ಟಿ, ಮೊಬೈಲ್ ನಂಬರ್, ವಿಶ್ವವಿದ್ಯಾನಿಲಯದ ನೊಂದಣಿ ಸಂಖ್ಯೆ, ಕಾಲೇಜು ಅಧ್ಯಯನ ಪ್ರಮಾಣಪತ್ರ, ವಿದ್ಯಾರ್ಥಿ ಮನೆ ವಿಳಾಸ ಮುಂತಾದ ದಾಖಲೆಗಳನ್ನು ಸಲ್ಲಿಸಬೇಕಾಗುತ್ತದೆ.
ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ 02.10.2024 ಮತ್ತು ಹೊಸ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 30/10/2024 ಎಂದು ತಿಳಿಸಲಾಗಿದೆ. ಆಯ್ಕೆಯಾದ ವಿದ್ಯಾರ್ಥಿಗಳು ವಿದ್ಯಾರ್ಥಿನಿಲಯಗಳಿಗೆ ಪ್ರವೇಶ ಪಡೆಯಲು 11.11.2024 ಕೊನೆಯ ದಿನಾಂಕ ಎಂದು ತಿಳಿಸಲಾಗಿದೆ.
Click