ನ್ಯೂಸ್ ನಾಟೌಟ್: ಸಫಾರಿಗೆ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್ನ ಮೇಲೆ ಚಿರತೆ ಏರಿ ಬಂದ ಘಟನೆ ನಡೆದಿದೆ. ಕೆಲ ಕಾಲ ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ ಉದ್ಯಾನದಲ್ಲಿ ನಡೆದಿದೆ.
ಇತ್ತೀಚಿಗೆ ಆರಂಭವಾಗಿರುವ ಚಿರತೆ ಸಫಾರಿಯಲ್ಲಿ (Cheetah Safari) ಚಿರತೆಗಳು ಬಸ್, ಜೀಪ್ ಬಳಿ ಬರುವುದು, ಕೆಲವು ಬಾರಿ ಬಸ್, ಜೀಪ್ಗಳ ಮೇಲೆ ಹತ್ತುವ ವಾಡಿಕೆ ಮಾಡಿಕೊಂಡಿವೆ. ಅದೇ ರೀತಿ ಇಂದು(ಅ.7) ಸಹ ಒಂದು ಚಿರತೆ ಬಸ್ ಮೇಲೆ ಏರಿ ಕಿಟಕಿಗಳಲ್ಲಿ ಪ್ರವಾಸಿಗರನ್ನು ನೋಡಿ ಗುರ್ ಎಂದಿದೆ. ನಂತರ ಚಾಲಕ ಬಸ್ ನಿಧಾನವಾಗಿ ಮುಂದಕ್ಕೆ ಚಲಿಸುತ್ತಿದ್ದಂತೆ ಬಸ್ನಿಂದ ಕೆಳಕ್ಕೆ ಹಾರಿ ಹೋಗಿದೆ.
ಕಳೆದ ಮೂರು ತಿಂಗಳ ಹಿಂದೆ ಉದ್ಯಾನವನದ ಕರಡಿ, ಸಿಂಹ ಸಫಾರಿಗಳಿಗೆ ಹೊಂದಿಕೊಂಡಂತೆ ಇರುವ ವಿಶಾಲ ತೆರೆದ ಆವರಣದಲ್ಲಿ 19 ಚಿರತೆಗಳಿಗೆ ಆಶ್ರಯ ನೀಡಿ ಪ್ರತಿ ದಿನ ಒಂದೊಂದು ತಂಡವನ್ನು ಸಫಾರಿಗೆ ಬಿಡಲಾಗುತ್ತಿದೆ.