ಬೆಳ್ತಂಗಡಿ: ರಾತ್ರಿ ಅಕ್ರಮ ಗೋ ಸಾಗಾಟ ಪತ್ತೆ..! 2 ಪಿಕಪ್ ವಾಹನ ಮತ್ತು 5 ದನಗಳು ವಶಕ್ಕೆ, ನಾಲ್ವರು ಅರೆಸ್ಟ್

ನ್ಯೂಸ್ ನಾಟೌಟ್ : ಅಕ್ರಮವಾಗಿ ನಡೆಯುತ್ತಿದ್ದ ಗೋ ಸಾಗಾಟವನ್ನು ಸ್ಥಳೀಯರ ಸಹಕಾರದೊಂದಿಗೆ ಪತ್ತೆ ಹಚ್ಚಿರುವ ಘಟನೆ ಬೆಳ್ತಂಗಡಿ ತಾಲೂಕಿನ ಮಲವಂತಿಗೆಯಲ್ಲಿ ನಡೆದಿದೆ. ಬೆಳ್ತಂಗಡಿ ಪೊಲೀಸರು ನಾಲ್ವರು ಆರೋಪಿಗಳನ್ನು ಗುರುವಾರ ರಾತ್ರಿ ಬಂಧಿಸಿದ್ದಾರೆ. ಎರಡು ಪಿಕಪ್ ವಾಹನಗಳು ಹಾಗೂ ಐದು ದನಗಳನ್ನು ವಶಪಡಿಸಿಕೊಂಡಿದ್ದಾರೆ.ಮಲವಂತಿಗೆ ಗ್ರಾಮದ ಎಳನೀರು ದಿಡುಪೆ ರಸ್ತೆಯಲ್ಲಿ ಪಿಕಪ್ ವಾಹನದಲ್ಲಿ ಅಕ್ರಮವಾಗಿ ದನಗಳನ್ನು ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿಯ ಆಧಾರದಲ್ಲಿ ಬೆಳ್ತಂಗಡಿ ಪೊಲೀಸರು ಈ ಕಾರ್ಯಾಚರಣೆ ನಡೆಸಿದ್ದಾರೆ. ಮಲವಂತಿಗೆ ಗ್ರಾಮದ ಕಜಕೆ ಎಂಬಲ್ಲಿ ಎಳನೀರು ಕಡೆಯಿಂದ ಬರುತ್ತಿದ್ದ ಎರಡು ಪಿಕಪ್ ವಾಹನಗಳನ್ನು ತಡೆದು ಪರಿಶೀಲಿಸಿದಾಗ ಐದು ದನಗಳನ್ನು ಸಾಗಾಟ ಮಾಡುತ್ತಿರುವುದು ಕಂಡು ಬಂದಿದೆ. ವಾಹನದಲ್ಲಿ ಇದ್ದವರ ಬಳಿ ದನಗಳ ಸಾಗಾಟಕ್ಕೆ ಯಾವುದೇ ಪರವಾನಿಗೆಗಳು ಇಲ್ಲದಿರುವುದು ಕಂಡು ಬಂದಿದೆ. ಚಿಬಿದ್ರೆ ಗ್ರಾಮದ ಪೆರಿಯಡ್ಕ ನಿವಾಸಿ ಯತೀಂದ್ರ(24), ತೋಟತ್ತಾಡಿ ಗ್ರಾಮದ ಬೆಂದ್ರಾಳ ನಿವಾಸಿ ಅರವಿಂದ(30), ಚಾರ್ಮಾಡಿ ಗ್ರಾಮದ ನಿವಾಸಿ ಉಸ್ಮಾನ್ ( 36) ಹಾಗೂ ಚಿಬಿದ್ರೆ ಗ್ರಾಮದ ನಿವಾಸಿ ಆರಿಫ್ (27) ಬಂಧಿತ ಆರೋಪಿಗಳು ಎಂದು ಪೊಲೀಸರು ತಿಳಿಸಿದ್ದಾರೆ. Click