ನ್ಯೂಸ್ ನಾಟೌಟ್ : ಬೆಂಗಳೂರಿನ ಬಾಬುಸಾಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಮೃತಪಟ್ಟವರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. ಕಟ್ಟಡದಡಿಯಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ವೇಳೆ 8 ಮೃತದೇಹಗಳು ಪತ್ತೆಯಾಗಿವೆ. ನಿನ್ನೆ ಮೂವರು ಮೃತದೇಹ ಪತ್ತೆಯಾಗಿತ್ತು. ಇಂದು ಇತರ ಐವರ ಮೃತದೇಹ ಪತ್ತೆಯಾಗಿದೆ.
ಪೊಲೀಸರ ಪ್ರಕಾರ, ಮೃತರಲ್ಲಿ ಐವರನ್ನು ಹರ್ಮನ್ (26), ತ್ರಿಪಾಲ್ (35), ಮೊಹಮ್ಮದ್ ಸಾಹಿಲ್ (19), ಸತ್ಯರಾಜು (25) ಮತ್ತು ಶಂಕರ್ ಎಂದು ಗುರುತಿಸಲಾಗಿದೆ. ಒಟ್ಟು 13 ಜನರನ್ನು ರಕ್ಷಿಸಲಾಗಿದ್ದು, ಆರು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಮಂಗಳವಾರ ಮಧ್ಯಾಹ್ನ 3.40ರ ಸುಮಾರಿಗೆ ನಗರದಲ್ಲಿ ಸುರಿದ ಭಾರಿ ಮಳೆಯ ನಡುವೆಯೇ ಕಟ್ಟಡ ಕುಸಿತ ಸಂಭವಿಸಿತ್ತು. ದುರಂತ ನಡೆದ ಸಂದರ್ಭದಲ್ಲಿ ಬಿಹಾರ, ಆಂಧ್ರಪ್ರದೇಶದ ಚಿತ್ತೂರು ಮತ್ತು ಕರ್ನಾಟಕದ ಯಾದಗಿರಿಯ ಒಟ್ಟು 21 ಕಾರ್ಮಿಕರು ಇದ್ದರು ಎನ್ನಲಾಗಿದೆ. ಕಟ್ಟಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಕಟ್ಟಡದ ಮಾಲೀಕ ಮತ್ತು ಕಟ್ಟಡ ನಿರ್ಮಾಣದ ಉಸ್ತುವಾರಿ ಗುತ್ತಿಗೆದಾರನನ್ನು ಬಂಧಿಸಿದ್ದಾರೆ.
Click