ನ್ಯೂಸ್ ನಾಟೌಟ್ : ವರ್ಷದಿಂದ ವರ್ಷಕ್ಕೆ ಖಾಸಗಿ ಶಾಲೆಗಳ ಫೀಸ್ ಗಳು ಗಗನಕ್ಕೇರುತ್ತಿವೆ. ಇದಕ್ಕೆ ಉತ್ತಮ ಉದಾಹರಣೆಯಂತಿರುವ ಪೋಸ್ಟ್ ಒಂದು ಇದೀಗ ವೈರಲ್ ಆಗುತ್ತಿದೆ. ಇಲ್ಲೊಂದು ಖಾಸಗಿ ಶಾಲೆ ಬರೀ ನರ್ಸರಿ ಮತ್ತು ಎಲ್.ಕೆ.ಜಿಯ ವಿದ್ಯಾರ್ಥಿಗಳಿಗೆ ಒಂದು ವರ್ಷಕ್ಕೆ ಬರೋಬ್ಬರಿ 1.5 ಲಕ್ಷ ರೂ. ಶಾಲಾ ಶುಲ್ಕವನ್ನು ವಿಧಿಸಿದೆ.
2024-25 ರ ನರ್ಸರಿ ಮತ್ತು ಜ್ಯೂನಿಯರ್ ಕೆಜಿ ಬ್ಯಾಚ್ ನ ಶಾಲಾ ಶುಲ್ಕ ರಶೀದಿಯ ಫೋಟೋ ಇದೀಗ ವೈರಲ್ ಆಗಿದ್ದು, ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಈ ಕುರಿತ ಪೋಸ್ಟ್ ಒಂದನ್ನು ಬೆಂಗಳೂರಿನ ವೈದ್ಯರಾದ ಡಾ.ಜಗದೀಶ್ ಚತುರ್ವೇದಿ ಎಂಬವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ವೈರಲ್ ಆಗುತ್ತಿರುವ ಶಾಲಾ ಶುಲ್ಕದ ವಿವರದ ಫೋಟೋದಲ್ಲಿ ಅಡ್ಮಿಶನ್ ಫೀಸ್, ಪೇರೆಂಟ್ ಓರಿಯೆಂಟೇಷನ್ ಫೀಸ್, ವಾರ್ಷಿಕ ಶುಲ್ಕ ಎಲ್ಲವನ್ನು ಸೇರಿಸಿ ಬರೋಬ್ಬರಿ 1,51,656 ರೂ. ಶಾಲಾ ಶುಲ್ಕವನ್ನು ವಿಧಿಸಿರುವುದು ಕಂಡಿದೆ.
Click