ನ್ಯೂಸ್ ನಾಟೌಟ್: ರಕ್ಷಣೆಗೆಂದು ಸೊಂಟದಲ್ಲಿಟ್ಟುಕೊಂಡಿದ್ದ ಚಾಕುವೇ ಜೀವಕ್ಕೆ ಮುಳುವಾಗಿರುವ ಘಟನೆ ಬೆಂಗಳೂರಿನಲ್ಲಿ ಗುರುವಾರ ನಡೆದಿದೆ.
ಬೆಂಗಳೂರಿನ ಹೆಬ್ಬಾಳದಲ್ಲಿ ಮಧ್ಯರಾತ್ರಿ ಇಬ್ಬರು ಯುವಕರಿದ್ದ ಬೈಕ್ ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಇಬ್ಬರು ಸೋದರ ಸಂಬಂಧಿಗಳು ಸಾವನ್ನಪ್ಪಿದ್ದಾರೆ.
ಬೊಮ್ಮಸಂದ್ರದ ಖಾಸಗಿ ಕಂಪನಿಯಲ್ಲಿ ಉದ್ಯೋಗಿಯಾಗಿರುವ ನಾಗರಾಜ್, ರಾಜೇಶ್ ಕುಮಾರ್ ಮೃತರು ಎಂದು ಗುರುತಿಸಲಾಗಿದೆ. ನಾಗರಾಜ್ ತಲೆಗೆ ಪೆಟ್ಟುಬಿದ್ದು ಮೃತಪಟ್ಟರೆ, ರಾಜೇಶ್ ಸೊಂಟದಲ್ಲಿ ಇಟ್ಟುಕೊಂಡಿದ್ದ ಚಾಕುವಿನಿಂದ ಆದ ಗಾಯದಿಂದ ಸಾವನ್ನಪ್ಪಿದ್ದಾರೆ. ರಕ್ಷಣೆಗೆಂದು ಪಡೆದ ಆಯುಧವೇ ಜೀವ ತೆಗೆದಿದೆ ಎನ್ನಲಾಗಿದೆ.
ಚಾಕುವನ್ನು ಏಕೆ ಇಟ್ಟುಕೊಂಡಿದ್ದರು ಎಂಬುದರ ಕುರಿತು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ನಾಗರಾಜ್ ಅತಿ ವೇಗದಲ್ಲಿದ್ದರು, ಬೀಳುವ ಮೊದಲು ಡಿವೈಡರ್ಗೆ ಡಿಕ್ಕಿ ಹೊಡೆದಿದ್ದರು. ಅಲ್ಲಿದ್ದವರು ಕೂಡಲೇ ಪೊಲೀಸರಿಗೆ ಕರೆ ಮಾಡಿದ್ದರು. ಬಳಿಕ ಆಂಬ್ಯುಲೆನ್ಸ್ ಕರೆಸಿ ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತು, ಅಷ್ಟರಲ್ಲಿ ಇಬ್ಬರೂ ಸಾವನ್ನಪ್ಪಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
Click