ನ್ಯೂಸ್ ನಾಟೌಟ್: ಕೇಂದ್ರೀಯ ಮೀಸಲು ಪೊಲೀಸ್ ಪಡೆಯ ಮಕ್ಕಳ (ಸಿಆರ್ಪಿಎಫ್) ಶಾಲೆಯ ಸಮೀಪ ಇಂದು(ಅ.20) ಬೆಳಿಗ್ಗೆ ಸ್ಫೋಟ ಸಂಭವಿಸಿದ್ದು, ಶಾಲೆಯ ಗೋಡೆಗೆ ಹಾನಿಯಾಗಿದ ಘಟನೆ ದೆಹಲಿಯ ರೋಹಿಣಿ ಪ್ರದೇಶದಲ್ಲಿ ನಡೆದಿದೆ.
ಘಟನೆಯಲ್ಲಿ ಯಾವುದೇ ಸಾವು-ನೋವುಗಳು ಸಂಭವಿಸಿಲ್ಲ. ಸ್ಫೋಟ ಹಿನ್ನೆಲೆಯಲ್ಲಿ ಘಟನಾ ಸ್ಥಳಕ್ಕೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಳಿಗ್ಗೆ 7.50ರ ಸುಮಾರಿಗೆ ಸ್ಫೋಟ ಸಂಭವಿಸಿತ್ತು. ತಕ್ಷಣ 2 ಅಗ್ನಿಶಾಮಕ ದಳದ ವಾಹನಗಳು ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಿದ್ದಾರೆ.
ಸ್ಥಳದಲ್ಲಿ ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಪರಿಶೀಲನೆ ನಡೆಸುತ್ತಿದ್ದು, ಪರಿಶೀಲನೆ ವೇಳೆ ವೈಟ್ ಪೌಡರ್ ಪತ್ತೆಯಾಗಿದ್ದು, ಇದು ಅನುಮಾನಗಳಿಗೆ ಕಾರಣವಾಗಿದೆ.
ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದಾಗ ದಟ್ಟ ಹೊಗೆ ಆವರಿಸಿತ್ತು. ಸ್ಫೋಟದ ತೀವ್ರತೆಗೆ ಸಮೀಪದ ಅಂಗಡಿಯ ಗಾಜುಗಳು ಹಾಗೂ ಅಂಗಡಿ ಬಳಿ ನಿಲ್ಲಿಸಿದ್ದ ಕಾರಿನ ಗಾಜುಗಳು ಹಾನಿಯಾಗಿವೆ. ಘಟನೆಯಲ್ಲಿ ಯಾರಿಗೂ ಗಾಯಗಳಾಗಿಲ್ಲ ಎಂದು ಡಿಸಿಪಿ ತಿಳಿಸಿದ್ದಾರೆ.
ವಿಧಿ ವಿಜ್ಞಾನ ಪ್ರಯೋಗಾಲಯದ (ಎಫ್ಎಸ್ಎಲ್) ತಂಡ ಭೇಟಿ ನೀಡಿದ್ದು, ಬಾಂಬ್ ನಿಷ್ಕ್ರಿಯ ದಳದ ಮತ್ತೊಂದು ತಂಡ ಕೂಡ ಪರಿಶೀಲನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
Click