ನ್ಯೂಸ್ ನಾಟೌಟ್: ದಿಲ್ಲಿಯಿಂದ ಲಂಡನ್ ಗೆ ಹೊರಟಿದ್ದ ವಿಸ್ತಾರ ವಿಮಾನಕ್ಕೆ ಬಾಂಬ್ ಬೆದರಿಕೆ ಹಾಕಿರುವ ಘಟನೆ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ ವಿಮಾನವನ್ನು ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಮಾನಗಳಲ್ಲಿ ಬಾಂಬ್ ಬೆದರಿಕೆ ಬರುತ್ತಿರುವುದು ಇದು ಹದಿನೈದನೇ ಪ್ರಕರಣವಾಗಿದೆ. ಈ ಕೂಡಲೇ ಎಚ್ಚೆತ್ತ ಅಧಿಕಾರಿಗಳು ವಿಮಾನದಲ್ಲಿದ್ದ ಪ್ರಯಾಣಿಕರನ್ನು ಸುರಕ್ಷಿತವಾಗಿ ಕೆಳಗಿಳಿಸಿ ತಪಾಸಣೆ ನಡೆಸಿದ್ದಾರೆ. ಆದರೆ ವಿಮಾನದಲ್ಲಿ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಕ್ಟೋಬರ್ 18ರಂದು ಶುಕ್ರವಾರ ರಾತ್ರಿ ದೆಹಲಿಯಿಂದ ಲಂಡನ್ ಗೆ ವಿಮಾನ ಹೊರಟಿತ್ತು. ಈ ವಿಮಾನಕ್ಕೆ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಶುಕ್ರವಾರ ತಡ ರಾತ್ರಿ ಸುಮಾರು 12.40 ರ ಸುಮಾರಿಗೆ (ಭಾರತೀಯ ಕಾಲಮಾನ) ಫ್ರಾಂಕ್ಫರ್ಟ್ ವಿಮಾನ ನಿಲ್ದಾಣದಲ್ಲಿ ಸುರಕ್ಷಿತವಾಗಿ ಇಳಿಸಲಾಯಿತು. ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿರದ ಹಿನ್ನೆಲೆಯಲ್ಲಿ ಎರಡು ಗಂಟೆಗಳ ಬಳಿಕ ಮತ್ತೆ ಲಂಡನ್ ಗೆ ಪ್ರಯಾಣ ಬೆಳೆಸಿತು ಎಂದು ವಿಮಾನಯಾನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.