ನ್ಯೂಸ್ ನಾಟೌಟ್: ಮುಖ್ಯಮಂತ್ರಿಗಳ ಕಾನ್ವೆ ರೂಲ್ಸ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಶಾಸಕ ಜನಾರ್ದನ ರೆಡ್ಡಿಗೆ ಸೇರಿದ್ದ ರೇಂಜ್ ರೋವರ್ ಕಾರನ್ನು ಗಂಗಾವತಿ ಸಂಚಾರಿ ಠಾಣೆ ಪೊಲೀಸರು ಸೀಜ್ ಮಾಡಿದ್ದಾರೆ. ಇಂದು(ಮಂಗಳವಾರ) ಬೆಂಗಳೂರಿನಲ್ಲಿ ಕಾರು ಜಪ್ತಿ ಮಾಡಿದ ಪೊಲೀಸರು ಗಂಗಾವತಿಗೆ ತಂದಿದ್ದಾರೆ.
ಇದೇ ಅ.5 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕೊಪ್ಪಳ ಜಿಲ್ಲೆಯ ಗಂಗಾವತಿ ಮಾರ್ಗವಾಗಿ ರಾಯಚೂರಿನಿಂದ ಜಿಂದಾಲ್ ಏರ್ಪೋರ್ಟ್ಗೆ ತೆರಳುತ್ತಿದ್ದರು. ಈ ವೇಳೆ ರೆಡ್ಡಿ ಕಾರು ಚಾಲಕ ಸಿಎಂ ಕಾನ್ವೆಗೆ ಎದುರಾಗಿ ಚಾಲನೆ ಮಾಡಿದ್ದ. ರೂಲ್ಸ್ ಬ್ರೇಕ್ ಹಿನ್ನೆಲೆ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ ಬಳಸುವ ರೇಂಜ್ ರೋವರ್, ಸ್ಕಾರ್ಪಿಯೊ ಹಾಗೂ ಫಾರ್ಚೂನರ್ ಸೇರಿ ಮೂರು ಕಾರಗಳ ಮೇಲೆ ಪೊಲೀಸರು ಎಫ್ಐಆರ್ ದಾಖಲಿಸಿದ್ದರು. ಅದರಂತೆ ಇಂದು ಬೆಂಗಳೂರಿನಲ್ಲಿ ಸೀಜ್ ಮಾಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಾವಲು ವಾಹನಕ್ಕೆ ಎದರಾಗಿ ಕಾರು ಚಾಲನೆ ಮಾಡಿದ್ದರು. ಈ ಹಿನ್ನಲೇ ಕರ್ತವ್ಯದಲ್ಲಿದ್ದ ಪೊಲೀಸರು ಚಾಲಕನ ವಿರುದ್ಧ ದೂರು ನೀಡಿದ್ದರು.
ಈ ಕುರಿತು ಪ್ರತಿಕ್ರಿಯಿಸಿದ ಶಾಸಕ ಜನಾರ್ದನ ರೆಡ್ಡಿ, ‘ರಾಜಕೀಯವಾಗಿ ಸಿದ್ದರಾಮಯ್ಯ ಏನೇ ಇದ್ದರೂ, ತೊಂದರೆ ಕೊಟ್ಟರೂ, ಸಿದ್ದರಾಮಯ್ಯ ಅಲ್ಲದೇ ಹೋದರೂ ಸಿಎಂ ಎಂದು ಮರ್ಯಾದೆ ಕೊಡುತ್ತೇನೆ. ಗಂಗಾವತಿಗೆ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಹೋಗಿದ್ದೆ. ಬಳ್ಳಾರಿಯಲ್ಲಿ ಮನೆಯಲ್ಲಿ ಹೋಮ ನಡೆಯುತ್ತಿತ್ತು.
ಪೂರ್ಣಾಹುತಿಗೆ ಬರಬೇಕು ಎಂದು ಹೇಳಿದ್ದರು. ಹಾಗಾಗಿ ಮನೆಗೆ ಹೊರಟಿದ್ದೆ. ಕಾರಿನಲ್ಲಿ ಸಿಸಿ ಕ್ಯಾಮೆರಾ ಇದೆ, ದೃಶ್ಯಾವಳಿ ಕೊಡುತ್ತೇನೆ. ಅರ್ಧ ಗಂಟೆ ಕಾಲ ಕಾದರೂಕಾನ್ವೇ ಬರಲಿಲ್ಲ. ನಾನು ಪೊಲೀಸರಿಗೆ ಹೇಳಿ ಹೋಗಬಹುದಿತ್ತು. ನನ್ನ ಮುಂದೆ ಇರುವ ವಾಹನ ಬಿಟ್ಟರೆ ಅವರಿಗೆ ಸಮಸ್ಯೆ ಆಗುತ್ತದೆ ಎಂದು ಸಿಎಂ ಬರುವ ಮೊದಲು ಹೋಗಬೇಕು ಎಂದು ಡಿವೈಡರ್ ಮೇಲೆ ಹೋದೆ. ಅಷ್ಟು ಮೂರ್ಖತನ ನನಗಿಲ್ಲ ಎಂದರು.
Click