ಗೋಬಿ ಮಂಚೂರಿ ಆಯ್ತು, ಈಗ ಗೋಲ್ ಗಪ್ಪಾ ನಿರ್ಬಂಧಿಸಲು ಮುಂದಾದ ಆಹಾರ ಇಲಾಖೆ..! ಗೋಲ್ ಗಪ್ಪಾ ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಿದ ಅಧಿಕಾರಿಗಳು..!

ನ್ಯೂಸ್ ನಾಟೌಟ್: ಕರ್ನಾಟಕದಲ್ಲಿ ಆಹಾರ ಗುಣಮಟ್ಟದ ವಿಚಾರದಲ್ಲಿ ಆಹಾರ ಇಲಾಖೆ ಕಠಿಣ ನಿಲುವು ತಳೆದಿದೆ. ಇತ್ತೀಚೆಗೆ ಗೋಬಿ ಮಂಚೂರಿಯಲ್ಲಿ ಕೃತಕ ಬಣ್ಣ, ರಾಸಾಯನಿಕ ಬಳಕೆಯಾದ ಹಿನ್ನಲೆಯಲ್ಲಿ ಈಗಾಗಲೇ ನಿರ್ಬಂಧ ವಿಧಿಸಿದೆ. ಇದೀಗ ಜನಪ್ರಿಯ ತಿನಿಸು ಗೋಲ್ ಗಪ್ಪಾ ಮೇಲೆಯೂ ನಿರ್ಬಂಧ ವಿಧಿಸಲು ಆಹಾರ ಇಲಾಖೆ ಮುಂದಾಗಿದ್ದು, ಈ ಬಗ್ಗೆ ಗುಣಮಟ್ಟ ಪರಿಶೀಲನೆ ನಡೆಯುತ್ತಿದೆ. ಗೋಲ್ ಗಪ್ಪಾದ ಗುಣಮಟ್ಟದ ಮೇಲೆ ಅನೇಕ ದೂರುಗಳು ಕೇಳಿ ಬಂದ ಕಾರಣ ಗೋಲ್ ಗಪ್ಪಾ ಪೂರಿ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿಗೆ ಮುಂದಾಗಿದೆ. ಆಹಾರ ಇಲಾಖೆಯಿಂದ ಫುಡ್ ಟೆಸ್ಟಿಂಗ್ ಕಾರ್ಯಾಚರಣೆ ಮುಂದುವರಿದಿದ್ದು, ಗೋಲ್ ಗಪ್ಪಾವನ್ನೂ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ. ಬೆಂಗಳೂರಿನಲ್ಲಿ ಗೋಲ್ ಗಪ್ಪಾ ಮಾದರಿಗಳನ್ನು ಸಂಗ್ರಹಿಸಿ ಪರಿಶೀಲನೆಗೆ ಒಳಪಡಿಸಲಾಗುತ್ತಿದೆ. ಬೆಂಗಳೂರು ಮಾತ್ರವಲ್ಲದೆ, ಕರ್ನಾಟಕದಾದ್ಯಂತ 200 ಕ್ಕೂ ಹೆಚ್ಚು ಕಡೆ ಗೋಲ್ ಗಪ್ಪಾ ಮಾದರಿ ಸಂಗ್ರಹಿಸಲಾಗಿದ್ದು, ಪರೀಕ್ಷೆಗೆ ಕಳುಹಿಸಲಾಗಿದೆ. ಕಳೆದ ಎರಡು ದಿನಗಳಿಂದ ಗೋಲ ಗಪ್ಪಾ ತಯಾರಿಕಾ ಘಟಕಗಳ ಮೇಲೆ ಆಹಾರ ಇಲಾಖೆ ದಾಳಿ ನಡೆಸಿದೆ. ಕೆಲವೇ ದಿನಗಳಲ್ಲಿ ವರದಿ ಬರಲಿದೆ. ಗೋಲ್ ಗಪ್ಪಾ ರುಚಿ ಹೆಚ್ಚಳಕ್ಕೆ ಯೂರಿಯಾ ಗೊಬ್ಬರ ಹಾಗೂ ಹಾರ್ಪಿಕ್ ಬಳಕೆ ಮಾಡಲಾಗುತ್ತಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಈ ಕಾರ್ಯಾಚರಣೆ ನಡೆಸಲಾಗುತ್ತಿದೆ. Click