ನ್ಯೂಸ್ ನಾಟೌಟ್: ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಬಸ್ ಚಾಲಕ ಮತ್ತು ಕಂಡಕ್ಟರ್ ಮೇಲೆ ಕುಡಿದ ಮತ್ತಿನಲ್ಲಿ ಕಿಡಿಗೇಡಿಗಳಿಂದ ಹಲ್ಲೆ ಮಾಡಿರುವಂತಹ ಘಟನೆ ನಡೆದಿದೆ. ಈ ಬಗ್ಗೆ ಸ್ವತಃ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಆರೋಪಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುವಂತೆ ಬೆಂಗಳೂರು ನಗರ ಪೊಲೀಸ್ ಕಮಿಷನರ್ ಗೆ ಪತ್ರ ಬರೆಯುತ್ತೇನೆ ಎಂದು ಹೇಳಿದ್ದಾರೆ.
ಸಚಿವ ರಾಮಲಿಂಗಾರೆಡ್ಡಿ ಮಾತನಾಡಿ, ನಿನ್ನೆ(ಅ.26) ನಡೆದಿರುವ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿದ್ದೇನೆ. BMTC ಎಂಡಿ ರಾಮಚಂದ್ರನ್, ಪೊಲೀಸ್ ಆಯುಕ್ತರ ಭೇಟಿ ಮಾಡುತ್ತೇನೆ ಎಂದಿದ್ದಾರೆ.ಡ್ರೈವರ್, ಚಾಲಕರ ಮೇಲೆ ಹಲ್ಲೆ ನಡೆಸುವವರ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದು, ಆರೋಪಿಗಳ ವಿರುದ್ಧ ಪೊಲೀಸರು ಕಠಿಣ ಕ್ರಮ ಕೈಗೊಳ್ಳಬೇಕು. ಕೇಸ್ ಮಾಡುವುದು ಮುಖ್ಯವಲ್ಲ, ಶಿಕ್ಷೆ ಆಗುವ ರೀತಿಯಲ್ಲಿ ಮಾಡಬೇಕು. ಜೈಲಿಗೆ ಹೋಗುವ ರೀತಿ ಮಾಡಬೇಕು, ಆಗ ಅವರಿಗೆ ಬುದ್ಧಿ ಬರುತ್ತದೆ ಎಂದು ಹೇಳಿದ್ದಾರೆ.