- +91 73497 60202
- [email protected]
- November 22, 2024 7:11 AM
ಸರ್ಕಾರಿ ಭೂಮಿ ಸಕ್ರಮಗೊಳಿಸಲು ಸರ್ಕಾರ ನಿರ್ಧಾರ..! 4 ತಿಂಗಳೊಳಗೆ ಎಲ್ಲಾ ಅರ್ಜಿ ಇತ್ಯರ್ಥ..?
ನ್ಯೂಸ್ ನಾಟೌಟ್: ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸೃತಗೊಂಡಿದ್ದ ಅರ್ಜಿಗಳನ್ನು ಪುನರ್ ಪರಿಶೀಲಿಸಲಾಗುವುದು ಎಂದು ಇತ್ತೀಚೆಗೆ ಕಂದಾಯ ಇಲಾಖೆ ಸಚಿವ ಕೃಷ್ಣಭೈರೇಗೌಡ ಹೇಳಿದ್ದಾರೆ. ಅದರಂತೆಯೆ ಇದೀಗ ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಈ ಬಗ್ಗೆ ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವ ಕೃಷ್ಣಭೈರೇಗೌಡ, ಸರ್ಕಾರಿ ಭೂಮಿ ಸಕ್ರಮಗೊಳಿಸುವ ಅರ್ಜಿಗಳ ಇತ್ಯರ್ಥಕ್ಕೆ ನಿರ್ಧಾರ ಮಾಡಲಾಗಿದೆ. ಸಾಗುವಳಿ ಮಾಡುತ್ತಿರುವರುವ 14 ಲಕ್ಷ ರೈತರು ಅರ್ಜಿ ಹಾಕಿದ್ದಾರೆ. ಸರ್ಕಾರಿ ಭೂಮಿ ಸಕ್ರಮಗೊಳಿಸುವಂತೆ ಅರ್ಜಿಗಳನ್ನು ಸಲ್ಲಿಸಿದ್ದಾರೆ. ಈ ಸಂಬಂಧ ತಹಶೀಲ್ದಾರ್ಗಳ ಜೊತೆ ಸಭೆ ನಡೆಸಿದ್ದೇನೆ. ನಾಲ್ಕೈದು ತಿಂಗಳಲ್ಲಿ ಎಲ್ಲಾ ರೈತರ ಅರ್ಜಿ ಇತ್ಯರ್ಥ ಮಾಡಲು ಸೂಚನೆ ನೀಡಿರುವುದಾಗಿ ಹೇಳಿದ್ದಾರೆ. ಈ ಬಾರಿ ಬಗರ್ ಹುಕಂ ಕಮಿಟಿಯಲ್ಲಿ ಸಕ್ರಮದ ಜೊತೆ ಸಾಗುವಳಿ ಚೀಟಿ ಮತ್ತು ಭೂಮಿ ಸರ್ವೆ ಮಾಡಿ ರೈತರ ಹೆಸರಿಗೆ ನೋಂದಣಿ ಕೂಡ ಮಾಡಿಕೊಡುತ್ತೇವೆ. ರೈತರ ಎಲ್ಲಾ ದಾಖಲೆಗಳನ್ನು ಡಿಜಿಟಲ್ ಮಾಡಿಕೊಡುತ್ತೇವೆ ಎಂದು ತಿಳಿಸಿದ್ದಾರೆ. ಹಿಂದೆ ಭೂಮಿ ಮಂಜೂರಾಗಿ ಪೋಡಿ ದುರಸ್ತಿ ಆಗದ 10 ಲಕ್ಷ ಪ್ರಕರಣಗಳಿವೆ. ಇವರೆಲ್ಲರ ದುರಸ್ತಿ ಪ್ರಕ್ರಿಕೆಯೆಗೆ ಚಾಲನೆ ನೀಡಿದ್ದೇವೆ ಎಂದು ಹೇಳಿದ್ದಾರೆ. ಜಾತಿ ಜನಗಣತಿ ವರದಿ ಜಾರಿ ವಿಚಾರವಾಗಿ ಮಾತನಾಡಿ ಅವರು, ಪರ ವಿರೋಧ ಚರ್ಚೆ ಆಗಲಿ. ಯಾರಿಗೆ ಆಗಲಿ ಅಭಿಪ್ರಾಯ ಹೇಳುವ ಅವಕಾಶ ಇದೆ. ಸಚಿವ ಸಂಪುಟ ಸಭೆಯಲ್ಲಿ ಅಭಿಪ್ರಾಯ ಹೇಳುತ್ತೇವೆ. ನಾನು ನನ್ನ ಅಭಿಪ್ರಾಯ ಸಭೆಯಲ್ಲಿ ಹೇಳುತ್ತೇನೆ ಎಂದಿದ್ದಾರೆ.ಕೊನೆಗೆ ಸಂಪುಟದಲ್ಲಿ ಏನು ತೀರ್ಮಾನ ಆಗುತ್ತದೆ ನೋಡಬೇಕು ಎಂದಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ