ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನಲ್ಲಿ ಇಂಗ್ಲಿಷ್ ವಿಭಾಗ, ಆಂತರಿಕ ಗುಣಮಟ್ಟ ಖಾತರಿ ಕೋಶ ಹಾಗೂ ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ(ರಿ.) ವತಿಯಿಂದ ಪದವಿ ವಿದ್ಯಾರ್ಥಿಗಳಿಗೆ “ಇಗ್ನೈಟ್ ಕೆರಿಯರ್” ಎಂಬ ತರಬೇತಿ ಕಾರ್ಯಕ್ರಮ ಶನಿವಾರ (ಅ.19)ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮವನ್ನು ಅಕಾಡೆಮಿ ಆಫ್ ಲಿಬೆರಲ್ ಎಜುಕೇಶನ್ (ರಿ.) ಉಪಾಧ್ಯಕ್ಷೆ ಶೋಭಾ ಚಿದಾನಂದ ಉದ್ಘಾಟಿಸಿ ಕಾರ್ಯಾಗಾರದ ಸದುಪಯೋಗವನ್ನು ಪಡೆದುಕೊಳ್ಳುವಂತೆ ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಸಂಪನ್ಮೂಲ ವ್ಯಕ್ತಿಗಳಾಗಿ ಆಗಮಿಸಿದ ಬೆಂಗಳೂರಿನ ಫಾರ್ಮೆಡ್ ಗ್ರೂಪ್ ಆಫ್ ಕಂಪೆನಿಯ ಉಪಾಧ್ಯಕ್ಷ ಹಾಗೂ ಸಜ್ಜನ ಪ್ರತಿಷ್ಠಾನ(ರಿ.) ಸ್ಥಾಪಕ ಡಾ. ಉಮ್ಮರ್ ಬೀಜದಕಟ್ಟೆ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು, ಸಮಯ ನಿರ್ವಹಣೆ, ನಾಯಕತ್ವದ ಗುಣ ಬೆಳೆಸಿಕೊಳ್ಳುವುದರಿಂದ ಭವಿಷ್ಯದಲ್ಲಿ ಯಶಸ್ಸು ಗಳಿಸಬಹುದು. ಕಲಿಯುವಿಕೆ ನಿರಂತರ ಪ್ರಕ್ರಿಯೆ. ಮನುಷ್ಯ ಹುಟ್ಟಿನಿಂದ ಸಾಯುವ ತನಕ ಕಲಿಯಬಹುದು. ಲರ್ನ್, ಅನ್ ಲರ್ನ್ ಹಾಗೂ ರಿಲರ್ನ್ ಬಗ್ಗೆ ವಿದ್ಯಾರ್ಥಿಗಳು ತಿಳಿದುಕೊಳ್ಳಬೇಕು ಎಂದರು.
ಫಾರ್ಮೆಡ್ ಲಿಮಿಟೆಡ್ ನ ತರಬೇತಿ ವಿಭಾಗದ ಸಹಾಯಕ ಉಪಾಧ್ಯಕ್ಷ ಅಂತಾರಾಷ್ಟ್ರೀಯ ತರಬೇತುದಾರ ವಿಕ್ರಂ ಸಾಗರ್ ಸಕ್ಸೇನಾ, ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ಪ್ರಾಂಶುಪಾಲ ಡಾ| ರುದ್ರಕುಮಾರ್ ಎಂ ಎಂ, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ರತ್ನಾವತಿ ಡಿ, ಐ.ಕ್ಯೂ.ಎ.ಸಿ ನಿರ್ದೇಶಕಿ ಡಾ| ಮಮತಾ ಕೆ., ಇಂಗ್ಲಿಷ್ ವಿಭಾಗ ಮುಖ್ಯಸ್ಥೆ ಹಾಗೂ ಉಪನ್ಯಾಸಕಿ ಭವ್ಯ ಪಿ ಎಮ್ ಉಪಸ್ಥಿತರಿದ್ದರು. ಪ್ರಥಮ ಬಿಎಸ್ಸಿ ವಿದ್ಯಾರ್ಥಿ ಅಭಿಷೇಕ್ ಪ್ರಾರ್ಥಿಸಿ, ಉಪನ್ಯಾಸಕಿ ರಂಜಿತಾ ವಂದಿಸಿದರು. ಸಭಾಕಾರ್ಯಕ್ರಮದ ಬಳಿಕ ವಿದ್ಯಾರ್ಥಿಗಳಿಗೆ ಚಟುವಟಿಕೆಗಳ ಮೂಲಕ ತರಬೇತಿ ಕಾರ್ಯಾಗಾರ ನಡೆಯಿತು.