ನ್ಯೂಸ್ ನಾಟೌಟ್: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಮಂದಿ ಆರೋಪಿಗಳಿಗೆ ಬೆಂಗಳೂರಿನ ಸೆಷನ್ಸ್ ಕೋರ್ಟ್ ಜಾಮೀನು ನೀಡಿದೆ.
ಆರೋಪಿಗಳಾದ ಅಮೋಲ್ ಕಾಳೆ, ರಾಜೇಶ್ ಡಿ ಬಂಗೇರಾ, ವಾಸುದೇವ್ ಸೂರ್ಯವಂಶಿ, ಋಷಿಕೇಶ್ ದೇವಡೇಕರ್, ಪರಶುರಾಮ್ ವಾಘ್ಮೋರೆ, ಗಣೇಶ್ ಮಿಸ್ಕಿನ್, ಅಮಿತ್ ರಾಮಚಂದ್ರ ಬಡ್ಡಿ ಮತ್ತು ಮನೋಹರ್ ದುಂಡೀಪಾ ಯಡವೆ ಗೆ ಜಾಮೀನು ದೊರಕಿದೆ ಎಂದು ವರದಿ ತಿಳಿಸಿದೆ.
ಅಕ್ಟೋಬರ್ 9ರಂದು ಈ 8 ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ. ಆದೇಶ ವಿವರ ಇನ್ನೂ ಲಭ್ಯವಾಗಿಲ್ಲ ಮತ್ತು ಜಾಮೀನು ಪ್ರಕ್ರಿಯೆ ನಡೆಯುತ್ತಿದೆ.
ಪತ್ರಕರ್ತೆ ಗೌರಿ ಲಂಕೇಶ್ ಕೊಲೆ ಪ್ರಕರಣದಲ್ಲಿ ಒಟ್ಟು 18 ಆರೋಪಿಗಳಿದ್ದಾರೆ. ಅವರ ಪೈಕಿ 15ನೇ ಆರೋಪಿಯಾಗಿರುವ ವಿಕಾಸ್ ಪಟೇಲ್ ಅಲಿಯಾಸ್ ದಾದಾ ಅಲಿಯಾಸ್ ನಿಹಾಲ್ ತಲೆಮರೆಸಿಕೊಂಡಿದ್ದು, ಈವರೆಗೂ ಪೊಲೀಸರ ಕೈಗೆ ಸಿಕ್ಕಿಲ್ಲ ಎನ್ನಲಾಗಿದೆ.
ಇತರೆ ಆರೋಪಿಗಳಾದ ಭರತ್ ಕುರಾನೆ, ಶ್ರೀಕಾಂತ್ ಪಂಗಾರ್ಕರ್, ಸುಜಿತ್ ಕುಮಾರ್ ಹಾಗೂ ಸುಧನ್ವ ಗೋಂದಲೇಕರ್ ಅವರಿಗೆ ಸೆ 4ರಂದು ಕರ್ನಾಟಕ ಹೈಕೋರ್ಟ್ ಜಾಮೀನು ಮಂಜೂರು ಮಾಡಿತ್ತು. 11ನೇ ಆರೋಪಿ ಎನ್ ಮೋಹನ್ ನಾಯಕ್ ಅಲಿಯಾಸ್ ಸಂಪಾಜೆ ಈ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿಯಾಗಿದ್ದಾನೆ. ಆತನಿಗೆ ಕಳೆದ ಡಿಸೆಂಬರ್ 7ರಂದು ಕರ್ನಾಟಕ ಹೈಕೋರ್ಟ್ ಜಾಮೀನು ನೀಡಿತ್ತು. ಅದನ್ನು ಈ ವರ್ಷದ ಆಗಸ್ಟ್ನಲ್ಲಿ ಸುಪ್ರೀಂ ಕೋರ್ಟ್ ಎತ್ತಿಹಿಡಿದಿತ್ತು. ಇದರ ಬಳಿಕ ಜುಲೈ 16ರಂದು ಅಮಿತ್ ದಿಗ್ವೇಕೆರ್, ಕೆಟಿ ನವೀನ್ ಕುಮಾರ್ ಮತ್ತು ಸುರೇಶ್ ಎಚ್ಎಲ್ಗೆ ಹೈಕೋರ್ಟ್ ಜಾಮೀನು ಕೊಟ್ಟಿತ್ತು ಎನ್ನಲಾಗಿದೆ.
Click