ನ್ಯೂಸ್ ನಾಟೌಟ್ : ಯುವತಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಪುಣೆಯಲ್ಲಿ ನಡೆದಿದೆ. ಪುಣೆಯ ಹೊರವಲಯದಲ್ಲಿ ಯುವತಿಯ ಸ್ನೇಹಿತನನ್ನು ಥಳಿಸಿ ಆಕೆಯ ಮೇಲೆ ಮೂವರು ಸಾಮೂಹಿಕ ಅತ್ಯಾಚಾರವೆಸಗಿದ್ದಾರೆ.
(ಅ.04)ಗುರುವಾರ ರಾತ್ರಿ 11 ಗಂಟೆ ಸುಮಾರಿಗೆ ಬೋಪದೇವ್ ಘರ್ ಪ್ರದೇಶದಲ್ಲಿ ಸಾಮೂಹಿಕ ಅತ್ಯಾಚಾರ ಎಸಗಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಆಕೆ ತನ್ನ ಸ್ನೇಹಿತನ ಜತೆ ಬೋಪ್ದೇವ್ ಗಢ ಪ್ರದೇಶಕ್ಕೆ ಹೋಗಿದ್ದರು, ಅಲ್ಲಿ ಮೂವರು ಅಪರಿಚಿತರು ಆಕೆಯ ಮೇಲೆ ಅತ್ಯಾಚಾರವೆಸಗಿದ್ದಾರೆ ಎನ್ನಲಾಗಿದೆ.
ಸಾಮೂಹಿಕ ಅತ್ಯಾಚಾರದ ಹಿಂದಿನ ಆರೋಪಿಗಳ ಪತ್ತೆಗೆ 10 ಪೊಲೀಸ್ ತಂಡಗಳನ್ನು ರಚಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪ್ರತ್ಯೇಕ ಸ್ಥಳದಲ್ಲಿ ಘಟನೆ ನಡೆದಿದ್ದು, ಮೂವರು ಯುವತಿಯ ಸ್ನೇಹಿತನ ಮೇಲೂ ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.
Click