ನ್ಯೂಸ್ ನಾಟೌಟ್: ಬೆಂಗಳೂರಿನಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಮತ್ತು ಅಸಮರ್ಪಕ ವ್ಯವಸ್ಥೆಗಳಿಂದಾಗಿ ಹಲವು ದುರಂತಗಳು ಸಂಭವಿಸುತ್ತಿವೆ. ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿದಿರುವ ಘಟನೆ ಇಂದು(ಅ.22) ನಡೆದಿದೆ.
ಕಾಮಗಾರಿಯ ವೇಳೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕಟ್ಟಡ ಬಿದ್ದು ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ.
ಕಾರ್ಯಾಚರಣೆ ವೇಳೆ ಅವಶೇಷಗಳಡಿಯಲ್ಲಿ ಸಿಲುಕಿದ್ದ ಮೂವರು ಕಾರ್ಮಿಕರ ಶವಗಳನ್ನು ಅಗ್ನಿಶಾಮಕ ಸಿಬ್ಬಂದಿ ಹೊರತೆಗೆದಿದ್ದಾರೆ. ಅಲ್ಲದೆ ಮೂವರನ್ನು ಸುರಕ್ಷಿತವಾಗಿ ಹೊರತೆಗೆದಿದ್ದಾರೆ. ಇನ್ನೂ 10 ಮಂದಿ ಕಾರ್ಮಿಕರು ಕಟ್ಟಡದ ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.
Click