- +91 73497 60202
- [email protected]
- November 24, 2024 5:54 AM
ಕಾಸರಗೋಡು: ದೇವಸ್ಥಾನ ಉತ್ಸವದ ವೇಳೆ ಪಟಾಕಿ ದುರಂತ..! 150ಕ್ಕೂ ಹೆಚ್ಚು ಮಂದಿಗೆ ಗಾಯ, 8 ಜನರ ಸ್ಥಿತಿ ಗಂಭೀರ..!
ನ್ಯೂಸ್ ನಾಟೌಟ್ : ದೀಪಾವಳಿ ಹಬ್ಬಕ್ಕೂ ಮುನ್ನವೇ ಪಟಾಕಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರದಲ್ಲಿ ದೇವಸ್ಥಾನವೊಂದರ ಉತ್ಸವ ವೇಳೆ ಕಳೆದ ಮಧ್ಯರಾತ್ರಿ ಅ.28 ರಂದು ನಡೆದಿದೆ. ಕಾಸರಗೋಡು ಜಿಲ್ಲೆಯ “ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವ”ದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿ ಉರಿದು 150ಕ್ಕೂ ಹೆಚ್ಚು ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ಗಾಯಗೊಂಡವರಲ್ಲಿ ಮಹಿಳೆಯರು ಮತ್ತು ಮಕ್ಕಳು ಸೇರಿದ್ದಾರೆ. ಗಾಯಾಳುಗಳನ್ನು ಕಾಸರಗೋಡು, ಕಣ್ಣೂರು ಮತ್ತು ಮಂಗಳೂರಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ. ಗಂಭೀರವಾಗಿ ಗಾಯಗೊಂಡವರಿಗೆ ಶೇ.80ರಷ್ಟು ಸುಟ್ಟ ಗಾಯಗಳಾಗಿವೆ ಎಂದು ಜಿಲ್ಲಾಧಿಕಾರಿ ಮಂಗಳವಾರ ಮಾಹಿತಿ ನೀಡಿದ್ದಾರೆ.ಅಪಘಾತಕ್ಕೆ ಕಾರಣವನ್ನು ಪತ್ತೆಹಚ್ಚಲಾಗುತ್ತಿದೆ. ಸ್ಥಳದಿಂದ ಮಾದರಿಗಳನ್ನು ಸಂಗ್ರಹಿಸಿಕೊಂಡು ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ದೇವಸ್ಥಾನದ ಬಳಿಯ ಪಟಾಕಿ ಸಂಗ್ರಹಾಗಾರಕ್ಕೆ ಬೆಂಕಿ ತಗುಲಿ ಈ ಅವಘಡ ಸಂಭವಿಸಿರುವ ಶಂಕೆ ವ್ಯಕ್ತವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸುರಕ್ಷತಾ ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡಿರಲಿಲ್ಲ. ಕನಿಷ್ಠ 100 ಮೀಟರ್ ಅಂತರವನ್ನು ಕಾಯ್ದುಕೊಳ್ಳುವ ಅವಶ್ಯಕತೆಯನ್ನು ಅನುಸರಿಸಿಲ್ಲ. ಪಟಾಕಿಗಳನ್ನು ಸಂಗ್ರಹಿಸಲು ಯಾವುದೇ ಅನುಮತಿಯನ್ನು ತೆಗೆದುಕೊಂಡಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ