- +91 73497 60202
- [email protected]
- November 22, 2024 7:38 AM
ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ನಕಲಿ ಖಾತೆ..! ಹಣಕ್ಕೆ ಬೇಡಿಕೆ ಇಟ್ಟ ದುಷ್ಕರ್ಮಿಗಳು..!
ನ್ಯೂಸ್ ನಾಟೌಟ್: ಉಡುಪಿ ಚಿಕ್ಕಮಗಳೂರು ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ದುಷ್ಕರ್ಮಿಗಳು ಸಾಮಾಜಿಕ ಜಾಲತಾಣಗಳಲ್ಲಿ ನಕಲಿ ಖಾತೆ ತೆರೆದು ಹಣಕ್ಕೆ ಬೇಡಿಕೆ ಇಟ್ಟಿರುವ ಘಟನೆ ನಡೆದಿದೆ. ಈ ಬಗ್ಗೆ ಉಡುಪಿ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸಂಸದ ಕೋಟ ಶ್ರೀನಿವಾಸ ಪೂಜಾರಿ ಹೆಸರಿನಲ್ಲಿ ಫೋಟೋವನ್ನು ದುರುಪಯೋಗಪಡಿಸಿಕೊಂಡು ಸಾಮಾಜಿಕ ಜಾಲತಾಣ ಇಸ್ಟಗ್ರಾಮ್ ನಲ್ಲಿ ನಕಲಿ ಖಾತೆ ತೆರೆದಿದ್ದು, ಈ ಮೂಲಕ ಸಾರ್ವಜನಿಕರಿಂದ ಹಣಕ್ಕಾಗಿ ಬೇಡಿಕೆಯನ್ನು ಇಟ್ಟಿದ್ದರು ಎಂದು ದೂರಲಾಗಿದೆ. ದುರುದ್ದೇಶಪೂರ್ವಕವಾಗಿ ಅಕ್ರಮ ಹಣವನ್ನು ಸಂಪಾದಿಸುವ ಹಾಗೂ ಹೆಸರನ್ನು ಕೆಡಿಸುವ ಉದ್ದೇಶದಿಂದ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರ ಹೆಸರಿನಲ್ಲಿ ನಕಲಿ ಖಾತೆಗಳನ್ನು ತೆರೆದ ಆರೋಪಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕೆಂದು ಸಂಸದರ ವಕೀಲ ಶ್ಯಾಮಸುಂದರ ನಾಯರಿ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ ಎನ್ನಲಾಗಿದೆ. Click
© 2021 Newsnotout | Website Developed By serverhug.
ನಮ್ಮ ವಾಟ್ಸಪ್ ಗ್ರೂಪ್ಗೆ ಸೇರಿ