ನ್ಯೂಸ್ ನಾಟೌಟ್: ಕಟ್ಟಡದ ಲಿಫ್ಟ್ ಕಾಮಗಾರಿಗೆಂದು ತೋಡಿದ್ದ ಗುಂಡಿಗೆ ಬಿದ್ದು 5 ವರ್ಷದ ಬಾಲಕ ಮೃತಪಟ್ಟಿರುವ ಘಟನೆ ಬೆಂಗಳೂರಿನ ಕಾಡುಗೋಡಿ ಪೊಲೀಸ್ ಠಾಣಾ ವ್ಯಾಪ್ತಿಯ ಕನ್ನಮಂಗಲದಲ್ಲಿ ನಡೆದಿದೆ.
ಸುಹಾಸ್ ಗೌಡ (5) ಮೃತ ಬಾಲಕ ಎಂದು ಗುರುತಿಸಲಾಗಿದೆ. ಅಕ್ಟೋಬರ್ 23ರಂದು ಬೆಳಗ್ಗೆ 9 ಗಂಟೆಯ ವೇಳೆಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಕನ್ನಮಂಗಲದ ಮಿಲ್ಕ್ ಡೈರಿ ಕಟ್ಟಡ ಕಾಮಗಾರಿ ನಡೆಸಲಾಗುತ್ತಿತ್ತು. ಈ ಹಿನ್ನೆಲೆ ಕಟ್ಟಡದಲ್ಲಿ ಲಿಫ್ಟ್ಗೆಂದು 5 ಅಡಿ ಗುಂಡಿ ತೋಡಲಾಗಿತ್ತು. ಭಾರೀ ಮಳೆಯ ಪರಿಣಾಮ ಗುಂಡಿಯಲ್ಲಿ ನೀರು ತುಂಬಿಕೊಂಡಿದ್ದರಿಂದ ನೆಲ ಕಾಣುತ್ತಿರಲಿಲ್ಲ.
ಈ ವೇಳೆ ಸುಹಾಸ್ ಮನೆ ಮುಂಭಾಗ ಆಟವಾಡುವ ವೇಳೆ ಆಯತಪ್ಪಿ ಈ ಗುಂಡಿಯಲ್ಲಿ ಬಿದ್ದು ಸಾವನ್ನಪ್ಪಿದ್ದಾನೆ. ಪ್ರಕರಣದ ಕುರಿತು ಮಿಲ್ಕ್ ಡೈರಿ ಅಧ್ಯಕ್ಷನ ಮೇಲೆ ಎಫ್.ಐ.ಆರ್ ದಾಖಲಾಗಿದೆ. ಘಟನೆ ಸಂಬಂಧ ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Click