ನ್ಯೂಸ್ ನಾಟೌಟ್: ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗ ಮತ್ತು ವಾಣಿಜ್ಯಶಾಸ್ತ್ರ ಸಂಘದ ವತಿಯಿಂದ ಪ್ರಥಮ ಬಿಕಾಂ ವಿದ್ಯಾರ್ಥಿಗಳಿಗೆ ಲೋಗೋ ರಂಗೋಲಿ ಸ್ಪರ್ಧೆ ಏರ್ಪಡಿಸಲಾಯಿತು.
ಮೆಂಬರ್ ಆಫ್ ಕಾಮರ್ಸ್ ನ ಅಧ್ಯಕ್ಷ ಸುಧಾಕರ್ ರೈ ಹಾಗೂ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ವಿಭಾಗದ ಉಪನ್ಯಾಸಕಿ ಸಾವಿತ್ರಿ ಕೆ ತೀರ್ಪುಗಾರರಾಗಿ ಸಹಕರಿಸಿದರು. ಬಳಿಕ ಸುಧಾಕರ ರೈ ಇವರು ವಿದ್ಯಾರ್ಥಿಗಳಿಗೆ ಲೋಗೋ ತಯಾರಿಯ ಬಗ್ಗೆ ಹೆಚ್ಚಿನ ಮಾರ್ಗದರ್ಶನ ನೀಡಿದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಡಾ. ರುದ್ರ ಕುಮಾರ್ ಎಂ ಎಂ, ವಿಭಾಗದ ಮುಖ್ಯಸ್ಥೆ ಹಾಗೂ ವಿದ್ಯಾರ್ಥಿ ಕ್ಷೇಮ ಪಾಲನಾಧಿಕಾರಿ ರತ್ನಾವತಿ ಡಿ ಮತ್ತು ವಿಭಾಗದ ಉಪನ್ಯಾಸಕರಾದ ಶ್ರೀಧರ ವಿ ಗೀತಾ ಶೆಣೈ ಹಾಗೂ ದಿವ್ಯ ಟಿ ಎಸ್ ಉಪಸ್ಥಿತರಿದ್ದರು.