ನ್ಯೂಸ್ ನಾಟೌಟ್: ಈ ಸಲದ ದುರ್ಗಾ ಪೂಜೆ ಹಿನ್ನೆಲೆಯಲ್ಲಿ ಕೈದಿಗಳಿಗೆ ವಿಶೇಷ ಆಹಾರದ ವ್ಯವಸ್ಥೆ ಮಾಡಲು ಗೃಹ ಇಲಾಖೆ ನಿರ್ಧರಿಸಿದೆ. ಪಶ್ಚಿಮ ಬಂಗಾಳ ಸರ್ಕಾರ ಈ ಕಾರ್ಯ ಎಲ್ಲರಿಗೂ ಅಚ್ಚರಿ ಮೂಡಿಸಿದೆ. ದುರ್ಗಾ ಪೂಜೆಯ ಸಂದರ್ಭದಲ್ಲಿ ಜೈಲಿನಲ್ಲಿರುವ ಕೈದಿಗಳು ಹಬ್ಬದ ಸಂಭ್ರಮದಿಂದ ದೂರ ಉಳಿಯಬಾರದು ಅನ್ನುವ ಕಾರಣಕ್ಕೆ ಗೃಹ ಇಲಾಖೆ ಇಂಥಹದ್ದೊಂದು ನಿರ್ಧಾರವನ್ನು ತೆಗೆದುಕೊಂಡಿದೆ.
ಅಕ್ಟೋಬರ್ 9 ರಿಂದ ಅಕ್ಟೋಬರ್ 12 ರವರೆಗೆ ಈ ನಾಲ್ಕು ದಿನದಂದು ಮಧ್ಯಾಹ್ನ ಹಾಗೂ ರಾತ್ರಿಯ ಊಟಕ್ಕೆ ವಿಶೇಷ ಖಾದ್ಯಗಳನ್ನು ತಯಾರಿಸಿ ಕೈದಿಗಳು ಹಾಗೂ ವಿಚಾರಣಾಧೀನ ಕೈದಿಗಳಿಗೆ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಈ ಕುರಿತು ಹೇಳಿಕೆ ನೀಡಿದ ಜೈಲು ಅಧಿಕಾರಿ ಪ್ರತಿ ವರ್ಷ ಹಬ್ಬದ ಸಮಯದಲ್ಲಿ ಕೈದಿಗಳು ಏನಾದರು ವಿಶೇಷ ಖಾದ್ಯವನ್ನು ನೀಡುವಂತೆ ಆಗ್ರಹಿಸುತ್ತಾರೆ. ಆದರೆ ಇದುವರೆಗೂ ಯಾವುದೇ ವಿಶೇಷ ಆಹಾರ ಕೈದಿಗಳಿಗೆ ನೀಡಿಲ್ಲ ಹಾಗಾಗಿ ಈ ಬಾರಿ ಕೈದಿಗಳ ಭೋಜನದಲ್ಲಿ ವಿಶೇಷ ಖಾದ್ಯಗಳನ್ನು ನೀಡಲು ಮುಂದಾಗಿದ್ದೇವೆ, ಜೊತೆಗೆ ಈ ಆಹಾರವನ್ನು ಜೈಲಿನಲ್ಲಿರುವ ಕೈದಿಗಳೇ ತಯಾರಿಸಲಿದ್ದಾರೆ ಎಂದು ಹೇಳಿದ್ದಾರೆ.