ನ್ಯೂಸ್ ನಾಟೌಟ್: ಕಾಡು ಪ್ರಾಣಿಯನ್ನು ಬೇಟೆಯಾಡಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕೊಡಗು ಸಂಪಾಜೆಯ ವಲಯ ಅರಣ್ಯಾಧಿಕಾರಿಗಳ ತಂಡ ಭರ್ಜರಿ ಕಾರ್ಯಾಚರಣೆ ನಡೆಸಿ ಮಾಂಸ ಸಹಿತ ಆರೋಪಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮತ್ತೋರ್ವ ಆರೋಪಿ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಅಕ್ಟೋಬರ್ 23 ರಂದು ಬುಧವಾರ ರಾತ್ರಿ ಕಾಡು ಪ್ರಾಣಿ ಬೇಟೆಯಾಡಿದ ಖಚಿತ ಮಾಹಿತಿ ಮೇರೆಗೆ ಉಪ ಅರಣ್ಯ ಸಂರಕ್ಷಣಾಧಿಕಾರಿ ಬಿ. ಭಾಸ್ಕರ್ ಹಾಗೂ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮೋಷಿನ್ ಪಾಷ ಮಾರ್ಗದರ್ಶನದಲ್ಲಿ ಉಪ ವಲಯ ಅರಣ್ಯಾಧಿಕಾರಿ ದೇಚಮ್ಮ ಇವರ ಸಮ್ಮುಖದಲ್ಲಿ ದಾಳಿ ನಡೆಸಿ ಪೆರಾಜೆಯ ಪೆರುಮುಂಡದ ಗಂಗಾಧರ ನನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ. ಅವರ ಮಗ ಜಿತನ್ ಅನ್ನುವಾತ ತಲೆಮರೆಸಿಕೊಂಡಿದ್ದಾನೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಸದ್ಯ ಮಾಂಸವನ್ನು ಎಫ್ ಎಸ್ ಎಲ್ ಟೆಸ್ಟ್ ಗೆ ಕಳುಹಿಸಿದ್ದು ಯಾವ ಪ್ರಾಣಿಯದ್ದು ಅನ್ನುವುದು ಇನ್ನಷ್ಟೇ ತಿಳಿದು ಬರಬೇಕಿದೆ.