ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ ಅಧಿಕಾರ ವಹಿಸಿಕೊಂಡ ಕ್ರಿಕೆಟಿಗ ಮೊಹಮ್ಮದ್ ಸಿರಾಜ್ , ಪೊಲೀಸ್‌ ಡ್ರೆಸ್‌ ನಲ್ಲಿ ಮಿಂಚಿದ ಟೀಂ ಇಂಡಿಯಾ ವೇಗಿ..!

ನ್ಯೂಸ್ ನಾಟೌಟ್: ಟೀಂ ಇಂಡಿಯಾ ವೇಗಿ ಮೊಹಮ್ಮದ್ ಸಿರಾಜ್ (Mohammed Siraj) ತೆಲಂಗಾಣ ಉಪ ಪೊಲೀಸ್ ವರಿಷ್ಠಾಧಿಕಾರಿಯಾಗಿ (ಡಿಎಸ್ಪಿ) ಇಂದು(ಅ.13) ಅಧಿಕಾರ ವಹಿಸಿಕೊಂಡಿದ್ದಾರೆ. ತೆಲಂಗಾಣ ಮುಖ್ಯಮಂತ್ರಿ ಎ.ರೇವಂತ್ ರೆಡ್ಡಿ ಅವರು ಈ ವರ್ಷದ ಆರಂಭದಲ್ಲಿ ಟಿ20 ವಿಶ್ವಕಪ್ ಯಶಸ್ಸು ಸೇರಿದಂತೆ ಭಾರತ ತಂಡಕ್ಕೆ ಸಲ್ಲಿಸಿದ ಸೇವೆಗಾಗಿ ಸಿರಾಜ್ ಅವರಿಗೆ ಗ್ರೂಪ್-1 ಸರ್ಕಾರಿ ಹುದ್ದೆಯನ್ನು ನೀಡಲಾಗುವುದು ಎಂದು ಘೋಷಿಸಿದ್ದರು. ತೆಲಂಗಾಣ ಪೊಲೀಸ್‌ ಇಲಾಖೆಯಲ್ಲಿ ಡಿಎಸ್‌ಪಿ ಹುದ್ದೆಯ ಜೊತೆಗೆ, ಹೈದರಾಬಾದ್‌ನ ಜುಬಿಲಿ ಹಿಲ್ಸ್‌ನ ರಸ್ತೆ ಸಂಖ್ಯೆ 78 ರ ಬಳಿ ಸರ್ಕಾರವು 600 ಚದರ ಗಜಗಳಷ್ಟು ಭೂಮಿಯನ್ನು ಕೂಡ ಸಿರಾಜ್ ಗೆ ಮಂಜೂರು ಮಾಡಿದೆ.ಸಿರಾಜ್ ಪೊಲೀಸ್ ಸಮವಸ್ತ್ರದಲ್ಲಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. Click